ಉತ್ತರ ಕರ್ನಾಟಕ ಪಕ್ಷ ಸ್ಥಾಪನೆಗೆ ಜನಾಭಿಪ್ರಾಯ ಸಂಗ್ರಹ ಶುರು!

ಸೋಮವಾರ, 11 ಫೆಬ್ರವರಿ 2019 (18:21 IST)
ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ ಆಗಬೇಕು ಎಂಬುದು ಬಹುತೇಕರ ಅಭಿಪ್ರಾಯ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಇದೀಗ ಉತ್ತರ ಕರ್ನಾಟಕ ಪಕ್ಷ ಸ್ಥಾಪನೆಗೆ ಸಿದ್ಧತೆ ಶುರುವಾಗಿದೆ.

ವಿಜಯಪುರದಲ್ಲಿ ಉತ್ತರ ಕರ್ನಾಟಕ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ನಾಗೇಶ್ ಗೋಲಶೆಟ್ಟಿ ಸುದ್ದಿಗೋಷ್ಠಿ ನಡೆಸಿದರು.

ಉತ್ತರ ಕರ್ನಾಟಕ ಪಕ್ಷ ಸ್ಥಾಪನೆಗೆ ಜನಾಭಿಪ್ರಾಯ ಸಂಗ್ರಹಣೆ ಅಭಿಯಾನ ಶುರುಮಾಡಲಾಗುತ್ತದೆ. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಆಗಬೇಕು ಎಂಬುದು ಶೇ. 85 ರಷ್ಟು ಉತ್ತರ ಕರ್ನಾಟಕ ಜನರ ಅಭಿಪ್ರಾಯವಾಗಿದೆ.

ಫೆಬ್ರವರಿ 2 ರಿಂದ 28 ರ ವರೆಗೆ ಎಲ್ಲಾ ಉ.ಕ ದ 13 ಜಿಲ್ಲೆಗಳಲ್ಲಿ ಸಹಿ ಸಂಗ್ರಹ ನಡೆಯಲಿದೆ ಎಂದರು. ಉತ್ತರ ಕರ್ನಾಟಕ ಪಕ್ಷದಲ್ಲಿ 50 % ಪುರುಷರು, 30 % ಮಹಿಳೆಯರಿಗೆ ಆದ್ಯತೆ ನೀಡಲಾಗುತ್ತದೆ. ಒಬ್ಬ ವ್ಯಕ್ತಿ ಮೂರು ಬಾರಿ ಚುನಾವಣೆಯಲ್ಲಿ  ಸ್ಪರ್ಧಿಸಬಹುದು, 70 ವರ್ಷಕ್ಕೆ ರಾಜಕೀಯ ನಿವೃತ್ತಿ ಕಡ್ಡಾಯವಾಗಿರುತ್ತದೆ ಎಂದು ವಿವರ ನೀಡಿದರು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ