ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ''ಶ್ರೀರಂಗಪಟ್ಟಣ, ಮಂಡ್ಯ, ಮದ್ದೂರು, ದಾವಣಗೆರೆ, ಬಳ್ಳಾರಿಯಲ್ಲಿ ಕಳಪೆ ಬೇಳೆ ಪೂರೈಕೆಯ ದೂರುಗಳಿದ್ದರೂ ಆಹಾರ ನಿಗಮದ ಅಧಿಕಾರಿಗಳು ಕಳಪೆ ಬೇಳೆ ಸರಬರಾಜು ಮಾಡುತ್ತಿರುವ ಕಂಪನಿಗಳ ವಿರುದ್ಧ ಕ್ರಮಕೈಗೊಳ್ಳದೆ ಇರುವುದಕ್ಕೆ ಏನು ಕಾರಣ? ಲಂಚದ ಹಣದಲ್ಲಿ ಯಾರೆಲ್ಲ ಪಾಲುದಾರರು?'' ಎಂದು ಅವರು ಪ್ರಶ್ನಿಸಿದ್ದಾರೆ.
ಈ ಸಚಿವರು, ಅಧಿಕಾರಿಗಳು ಹೊಟ್ಟೆಗೆ ಏನು ತಿನ್ನುತ್ತಿದ್ದಾರೆ?'' ಎಂದು ಹೇಳಿದರು.
''ಕಳಪೆ ಗುಣಮಟ್ಟದ ಬೇಳೆ ಸರಬರಾಜು ಮಾಡುತ್ತಿರುವ ಕಂಪನಿಗಳನ್ನು ತಕ್ಷಣ ಬ್ಲಾಕ್ ಲೀಸ್ಟ್ ಗೆ ಸೇರಿಸಬೇಕು ಮತ್ತು ಕಂಪನಿಗಳ ಜೊತೆ ಷಾಮೀಲಾಗಿ ಭ್ರಷ್ಟಾಚಾರ ಎಸಗಿರುವ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸುತ್ತೇನೆ'' ಎಂದು ತಿಳಿಸಿದರು.