ಹೃದಯಾಘಾತದಿಂದ ಸಾವನ್ನಪ್ಪಿದರೆ ಮರಣೋತ್ತರ ಪರೀಕ್ಷೆ ಕಡ್ಡಾಯ

Sampriya

ಮಂಗಳವಾರ, 8 ಜುಲೈ 2025 (15:56 IST)
Photo Credit X
ಬೆಂಗಳೂರು: ರಾಜ್ಯದಲ್ಲಿ ದಾಖಲಾಗುತ್ತಿರುವ ಸಾಲು ಸಾಲು ಹೃದಯಾಘಾತ ಪ್ರಕರಣ ಸಂಬಂಧ ರಾಜ್ಯದ ಕಾಂಗ್ರೆಸ್ ಈಗಾಗಲೇ ಹಲವು ಕ್ರಮಗಳನ್ನು ಜಾರಿ ಮಾಡಿದೆ. ಇದೀಗ ಹೃದಯಾಘಾತಕ್ಕೆ ಬಲಿಯಾದವರ ಮರಣೋತ್ತರ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ. ಹೃದಯಾಘಾತವನ್ನು ಅಧಿಸೂಚಿತ ಕಾಯಿಲೆ ಎಂದು ಘೋಷಿಸಲಾಗಿದೆ.

ಹೃದಯಾಘಾತದ ಹಠಾತ್ ಸಾವಿಗೆ ಲಸಿಕೆ ಕಾರಣವಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಶಾಲೆಗಳ ಪಠ್ಯದಲ್ಲೂ ಹೃದಯಾಘಾತ ಸಂಬಂಧ ಪಠ್ಯವನ್ನು ಅಳವಡಿಸಲಾಗುವುದು. ಮಕ್ಕಳಿಗೆ ಶಾಲೆಗಳಲ್ಲಿ ಹೃದಯ ಪರೀಕ್ಷೆ ನಡೆಸಲಾಗುವುದು. ಕೋವಿಡ್ ಬಳಿಕ ಬದಲಾದ ಜೀವನ ಶೈಲಿಯಿಂದ ಹೃದಯಾಘಾತ ಹೆಚ್ಚಳವಾಗಿದೆ ಎಂದು ತಿಳಿಸಿದ್ದಾರೆ.

ಹೃದಯದ ವಿಚಾರ ಪಠ್ಯದಲ್ಲಿ ಅಳವಡಿಕೆ, 15 ವರ್ಷದ ಮಕ್ಕಳಿಗೆ ಶಾಲೆಯಲ್ಲಿ ಹೃದಯ ಸೇರಿ ಆರೋಗ್ಯ ತಪಾಸಣೆ, ಎಲ್ಲ ತಾಲೂಕು ಆಸ್ಪತ್ರೆಗಳಿಗೂ ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ವಿಸ್ತರಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಹೃದಯಘಾತವನ್ನು ಅಧಿಸೂಚಿತ ಕಾಯಿಲೆ ಎಂದು ಘೋಷಿಸಲು ತೀರ್ಮಾನಿಸಲಾಗಿದೆ. ಆಸ್ಪತ್ರೆಯ ಹೊರಗೆ ಯಾರಾದರೂ ಹೃದಯಾಘಾತದಿಂದ ಸಾವನ್ನಪ್ಪಿದರೆ ಮರಣೋತ್ತರ ಪರೀಕ್ಷೆ ಕಡ್ಡಾಯ  ಸೇರಿದಂತೆ ಹಲವು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ