ಬೆಂಗಳೂರು : ನಾಮ ಪತ್ರ ಸಲ್ಲಿಕೆಯಾಗದ ಹಿನ್ನಲೆಯಲ್ಲಿ ಬೆಂಗಳೂರು ಮಹಾನಗರ ಪಾಲಿಕೆಯ 12 ಸ್ಥಾಯಿ ಸಮಿತಿಯ ಚುನಾವಣೆಯನ್ನು ಮುಂದೂಡಲಾಗಿದೆ.
ಇಂದು ಟೌನ್ ಹಾಲ್ ನಲ್ಲಿ ಬಿಬಿಎಂಪಿಯ 12 ಸ್ಥಾಯಿ ಸಮಿತಿಯ ಚುನಾವಣೆ ನಡೆಯಬೇಕಿತ್ತು. ಆದರೆ 3 ಪಕ್ಷದವರು ನಾಮ ಪತ್ರ ಸಲ್ಲಿಕೆ ಮಾಡದ ಹಿನ್ನಲೆಯಲ್ಲಿ ಸ್ಥಾಯಿ ಸಮಿತಿಯ ಚುನಾವಣೆಯನ್ನು ಮುಂದೂಡಲಾಗಿದೆ.
ಇಂದು ಬೆಳಿಗ್ಗೆ 9.30ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿತ್ತು. ಆದರೆ ಪಕ್ಷಗಳು ಉಪಚುನಾವಣೆಯ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಕಾರಣ ನಾಮ ಪತ್ರ ಸಲ್ಲಿಕೆ ಮಾಡಲಿಲ್ಲ ಎನ್ನಲಾಗಿದೆ.