ಪ್ರಥಮ PU ಪರೀಕ್ಷೆ ಮುಂದೂಡಿಕೆ
7ನೇ ವೇತನ ಆಯೋಗ ವರದಿ ಜಾರಿಗೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರು ಮುಷ್ಕರ ನಡೆಸಿದ್ರು. ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆಯ ಸುಮಾರು 10 ಲಕ್ಷ ನೌಕರರು ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದರು. ಇದರಿಂದ ಪರೀಕ್ಷೆಗಳಿಗೂ ರಾಜ್ಯ ಸರ್ಕಾರಿ ನೌಕರರ ಮುಷ್ಕರ ಬಿಸಿ ತಟ್ಟಿದೆ. ಇಂದು ಬೆಂಗಳೂರು ದಕ್ಷಿಣ ಜಿಲ್ಲೆ, ಬಾಗಲಕೋಟೆಯಲ್ಲಿ ಪದವಿಪೂರ್ವ ಕಾಲೇಜುಗಳ ಪ್ರಥಮ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಇನ್ನು ಕಲಬುರಗಿಯಲ್ಲಿ ಎಸ್ಎಸ್ಎಲ್ಸಿ ಪೂರ್ವಭಾವಿ ಪರೀಕ್ಷೆ ಮುಂದೂಡಲಾಗಿತ್ತು. ಬೆಂಗಳೂರು ದಕ್ಷಿಣ ಜಿಲ್ಲೆ ಪದವಿಪೂರ್ವ ಕಾಲೇಜುಗಳಲ್ಲಿ ದಿನಾಂಕ 1.3.2023ರಂದು ನಡೆಯಬೇಕಾಗಿದ್ದ ಪ್ರಥಮ ಪಿಯುಸಿ Biology, Computer science, Electronics and Sociology ವಿಷಯದ ಪರೀಕ್ಷೆಗಳನ್ನು ಸರ್ಕಾರಿ ನೌಕರರ ಮುಷ್ಕರದ ಕಾರಣ ವಿದ್ಯಾರ್ಥಿಗಳಿಗೆ ಉಂಟಾಗಬಹುದಾದ ತೊಂದರೆಗಳನ್ನು ತಪ್ಪಿಸಲು ದಿನಾಂಕ 4-3-2023ಕ್ಕೆ ಮುಂದೂಡಲಾಗಿದೆ. ನಾಳೆಯಿಂದ ನಡೆಯಬೇಕಾಗಿದ್ದ ಪರೀಕ್ಷೆಗಳು ಯಥಾಪ್ರಕಾರ ಯಾವುದೇ ಬದಲಾವಣೆ ಇಲ್ಲದೆ ನಡೆಯುತ್ತವೆ. ಯಾವುದೇ ಬದಲಾವಣೆಗಳಿದ್ದಲ್ಲಿ ಮುಂದೆ ನಿಮ್ಮ ಗಮನಕ್ಕೆ ತರಲಾಗುವುದು ಎಂದು ಬೆಂಗಳೂರು ದಕ್ಷಿಣ ಜಿಲ್ಲೆಯ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ