ಮೈಸೂರು : ಬಡತನ ಮುಕ್ತ ಕರ್ನಾಟಕ ಹಾಗೂ ಬಡತನ ಮುಕ್ತ ಭಾರತ ನಮ್ಮ ಪರಿಕಲ್ಪನೆ ಆಗಿದ್ದು, ಅದಕ್ಕಾಗಿ ಹತ್ತು ಹಲವು ಯೋಜನೆಗಳನ್ನು ರೂಪಿಸಲಾಗಿದೆ.
ಇದರ ಪ್ರಮುಖ ಭಾಗವಾಗಿಯೇ ಒಂದು ದೇಶ- ರೇಷನ್ ಒಂದು ಪಡಿತರ ಚೀಟಿಯಂಥ ಯೋಜನೆ ಜಾರಿಗೊಳಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಮಹಾರಾಜ ಕಾಲೇಜು ಮೈದಾನದಲ್ಲಿ ಸೋಮವಾರ ಕೇಂದ್ರ ಸರ್ಕಾರದ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ, ನಾಗನಹಳ್ಳಿ ಹೊಸ ಕೋಚಿಂಗ್ ಕಾಂಪ್ಲೆಕ್ಸ್, ಮೈಸೂರು ರೈಲು ನಿಲ್ದಾಣ ಅಭಿವೃದ್ಧಿಗೆ ಶಂಕುಸ್ಥಾಪನೆ ಹಾಗೂ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ಎಕ್ಸಲೆನ್ಸ್ ಕೇಂದ್ರ ಉದ್ಘಾಟಿಸಿ ಮಾತನಾಡಿದರು.
ಗರೀಭಿ ಕಲ್ಯಾಣ ಯೋಜನೆ ಈ ಹಿಂದೆ ಸೀಮಿತ ಪರಿಮಿತಿಯಲ್ಲಿತ್ತು. ಆದರೆ, ಅದನ್ನು ದೇಶವ್ಯಾಪಿ ವಿಸ್ತರಿಸಲಾಗಿದೆ. ಇಂದು ಈ ಯೋಜನೆ ರಾಜ್ಯದ ಗಡಿ ದಾಟಿ ಎಲ್ಲಡೆ ಹರಡಿದೆ ಎಂದರು.
ರಾಜ್ಯದಲ್ಲಿ ಹಾಗೂ ದೇಶದಲ್ಲಿ ಅನೇಕ ಸರ್ಕಾರಗಳು ಆಡಳಿತ ನಡೆಸಿ ಹೋಗಿವೆ. ಆದರೆ, ಬಿಜೆಪಿ ನೇತೃತ್ವದ ಸರ್ಕಾರ ಹಳ್ಳಿ, ಮಹಿಳೆ, ರೈತ, ಬಡವ ಸೇರಿ ದೀನ ದಲಿತರ ಪರ ಸದಾ ಯೋಜನೆ ರೂಪಿಸುತ್ತಾ ಬಂದಿದೆ.
ಕಳೆದ ಎಂಟು ವರ್ಷಗಳಲ್ಲಿ ಜನರ ಭಾವನೆ ಅರ್ಥಮಾಡಿಕೊಂಡು ನಮ್ಮ ಸರ್ಕಾರ ಹೆಜ್ಜೆ ಇಟ್ಟಿದೆ. ದೇಶದ ಪ್ರತಿಯೊಬ್ಬರ ಹಿತ ಕಾಯುವುದೇ ನಮ್ಮ ಉದ್ದೇಶ. ರೈತರಿಗಾಗಿ ಪಿಎಂ ಕಿಸಾನ್ ಯೋಜನೆ ಜಾರಿಗೊಳಿಸಲಾಗಿದೆ.