ಬೆಂಗಳೂರಿನಲ್ಲಿ ಪವರ್ ಕಟ್!

ಶುಕ್ರವಾರ, 31 ಡಿಸೆಂಬರ್ 2021 (09:25 IST)
ಬೆಂಗಳೂರಿಗರಿಗೆ ಪ್ರತಿನಿತ್ಯ ಇರುವ ಹಲವು ಸಮಸ್ಯೆಗಳ ಜೊತೆ ವಿದ್ಯುತ್ ಕಡಿತ ಸಂಪರ್ಕ ಸಮಸ್ಯೆಯು ದೊಡ್ಡ ತೊಂದರೆಯಾಗಿ ಪರಿಣಮಿಸಿದೆ.
 
ಈಗಾಗಲೇ ಒಂದಲ್ಲ ಒಂದು ಕಾರಣ ಹೇಳಿ ಪ್ರತಿನಿತ್ಯ ಬೆಂಗಳೂರಿನ ಹಲವಾರು ಪ್ರದೇಶಗಳಲ್ಲಿ ಬೆಸ್ಕಾಂ ವಿದ್ಯುತ್ ಕಡಿತ ಮಾಡುತ್ತಲೇ ಇದೆ. ಹೀಗಾಗಿ ಎಷ್ಟೋ ಜನರು ತಮ್ಮ ಹಲವು ಅಗತ್ಯಗಳನ್ನು ಪೂರೈಕೆ ಮಾಡಿಕೊಳ್ಳಲಾಗದ ಸ್ಥಿತಿಯಲ್ಲಿ ಇದ್ದಾರೆ.

ಅದರಲ್ಲೂ ವರ್ಕ್ ಫ್ರಮ್ ಹೋಮ್ ಎಂದು ಕಾರ್ಯ ನಿರ್ವಹಣೆ ಮಾಡುತ್ತಿರುವ ಜನರು ಪ್ರತಿನಿತ್ಯ ವಿದ್ಯುತ್ ಕಡಿತವಾಗುತ್ತಿರುವುದಕ್ಕೆ ತೊಂದರೆಗೆ ಒಳಗಾಗಿದ್ದಾರೆ.. ಇದು ಸಾಲದು ಎಂಬಂತೆ ರಾಜ್ಯದಲ್ಲಿ ತೀವ್ರ ಚಳಿ ಶುರುವಾಗಿದ್ದು, ಜನರು ಮನೆಯಿಂದ  ಹೊರ ಬರಲಾರದೆ ಸಂಕಷ್ಟ ಪಡುತ್ತಿದ್ದಾರೆ.

ಹೀಗಾಗಿ ವಾರಾಂತ್ಯದ ವೇಳೆಯಲ್ಲಿ ಕುಟುಂಬಸ್ಥರು ಜೊತೆಗೆ ಕುಳಿತು ಮನೆಯಲ್ಲಿ ಕಾಲ ಕಳೆಯುತ್ತಾ ಟಿವಿ  ನೋಡಬೇಕು ಎಂದುಕೊಳ್ಳುತ್ತಿರುವವರಿಗೂ ಬೆಸ್ಕಾಂ ವಿದ್ಯುತ್ ಕಡಿತ ಮಾಡುತ್ತಿರುವುದು ದೊಡ್ಡ ರಗಳೆಯಾಗಿದೆ.ಅಲ್ಲದೆ ಡಿಸೆಂಬರ್ 31ರಂದು ಬೆಂಗಳೂರಲ್ಲಿ ತುರ್ತು ವಿದ್ಯುತ್ ನಿರ್ವಹಣೆ ಕಾಮಗಾರಿ ಇರುವುದರಿಂದ ವಿದ್ಯುತ್ ವ್ಯತ್ಯಯ ಆಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ