ಸಿಲಿಕಾನ್ ಸಿಟಿಯಲ್ಲಿ ವಿದ್ಯುತ್ ವ್ಯತ್ಯಯ

ಸೋಮವಾರ, 27 ಸೆಪ್ಟಂಬರ್ 2021 (20:23 IST)
ವಿದ್ಯುತ್ ವ್ಯತ್ಯಯ- ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲಸಿಲಿಕಾನ್ ಸಿಟಿ ಬೆಂಗಳೂರಿನ(Bengaluru) ಹಲವೆಡೆ ಇಂದು ವಿದ್ಯುತ್​ ವ್ಯತ್ಯಯವಾಗಲಿದ್ದು(Power Cut), ಸಾರ್ವಜನಿಕರು ಸಹಕರಿಸಬೇಕೆಂದು ಎಂದು ಬೆಸ್ಕಾಂ(BESCOM) ಮನವಿ ಮಾಡಿದೆ. ವಿದ್ಯುತ್ ಕೇಂದ್ರಗಳಲ್ಲಿ ತುರ್ತು ಕಾರ್ಯನಿರ್ವಹಣೆ ಕೈಗೆತ್ತಿಕೊಂಡಿರುವುದರಿಂದ ಇದೇ 27ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ನಗರದ ವಿವಿಧ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಯಾವ್ಯಾವ ಪ್ರದೇಶಗಳಲ್ಲಿ ವಿದ್ಯುತ್ ಸಮಸ್ಯೆ ತಲೆದೋರಲಿದೆ ಎಂಬ ಪಟ್ಟಿ ಇಲ್ಲಿದೆ.
 
ಇಸ್ಕಾನ್‌ ಬಳಿಯ ಮಂತ್ರಿ ವಸತಿ ಸಮುಚ್ಚಯ, ತಲಘಟ್ಟಪುರ, ರಘುವನಹಳ್ಳಿ, ಗುಬ್ಲಾಳ, ಕುವೆಂಪುನಗರ, ವಿವಿ ನಗರ, ವಿವಿ ಬಡಾವಣೆ, ಬಾಲಾಜಿ ಲೇಔಟ್‌, ರಾಯಲ್‌ ಫಾರ್ಮ್‌, ಎಚ್‌ಎಸ್‌ಆರ್‌ ಬಡಾವಣೆಯ 7ನೇ ಸೆಕ್ಟರ್‌ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ ಆಗಲಿದೆ' ಎಂದು ಎಂದು ಸೂಚನೆ ನೀಡಲಾಗಿದೆ.
 
ಈ ಪ್ರದೇಶಗಳಲ್ಲಿ ವಿದ್ಯುತ್ ಇರಲ್ಲ..
 
ರಾಮಗೊಂಡನಹಳ್ಳಿ, ವೈಟ್ ಫೀಲ್ಡ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು ಹಾಗೂ ಪಿ & ಟಿ ಲೇಔಟ್, ಹೊರಮಾವು, ಬಾಬುಸಾಪಾಳ್ಯ ಮತ್ತು ಅಲ್ಲಿನ ಕೆಲ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ತಿಳಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ