ಇಂದು ನಗರದಲ್ಲಿ ಬೆಳಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ `ವಿದ್ಯುತ್ ವ್ಯತ್ಯಯ ಉಂಟಾಗಲಿದೆ.ಲೈನ್ ನಿರ್ವಹಣೆ, ಕೇಬಲ್ ಗಳನ್ನು ಸ್ಥಳಾಂತರಿಸುವುದು, ರಿಂಗ್ ಮುಖ್ಯ ಘಟಕದ ನಿರ್ವಹಣೆ, ಮರ ಕತ್ತರಿಸುವುದು ಸೇರಿ ಹಲವು ಕಾಮಗಾರಿ ನಗರದಲ್ಲಿ ನಡೆಯಲಿವೆ .ಹೀಗಾಗಿ ಇಂದಿನಿಂದ ಅಕ್ಟೋಬರ್ 31 ರವರೆಗೆ ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಇಂದು ಗುಬ್ಬಣ್ಣ ಎಸ್ಟೇಟ್, 6ನೇ ಬ್ಲಾಕ್, ರಾಜಾಜಿನಗರ, ಸುಬ್ರಮಣ್ಯನಗರ, ಲೋಕಿಕೆರೆ ರಸ್ತೆ, ಕೈಗಾರಿಕಾ ಪ್ರದೇಶ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ
.
ನಾಳೆ ಕುಂಟೇಗೌಡನಹಳ್ಳಿ, ಯಲದಬಾಗಿ, ಹಾವಿನಹಾಳು, ಕಾಟವೀರನಹಳ್ಳಿ, ನವನೇಬೋರನಹಳ್ಳಿ, ಅಜ್ಜಯ್ಯನಪಾಳ್ಯ, ಎಲ್.ಎಚ್.ಪಾಳ್ಯ, ಬೋರಸಂದ್ರ,ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವ್ಯತ್ಯಯವಾಗಲಿದೆ.