ಅಧಿಕಾರಿಗಳೊಂದಿಗೆ ಪ್ರಹ್ಲಾದ್ ಜೋಶಿ ಸಭೆ
ಕಲ್ಲಿದ್ದಲಿನ ವಿವಿಧ ಯೋಜನೆಗಳ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಿರಿಯ ಅಧಿಕಾರಿಗಳ ಜೊತೆ ನಿನ್ನೆ ದೆಹಲಿಯಲ್ಲಿ ಸಭೆ ನಡೆಸಿದ್ದಾರೆ. ಕಲ್ಲಿದ್ದಲು ಲಿಗ್ನೈಟ್ನಿಂದ ನವೀಕರಿಸಬಹುದಾದ ಇಂಧನ ಯೋಜನೆಗಳ ಪ್ರಸ್ತುತ ಸ್ಥಿತಿಗಳ ಕುರಿತಂತೆ ಸಭೆಯಲ್ಲಿ ಪರಿಶೀಲನೆ ನಡೆಸಿದ್ದಾರೆ. ಕೋಲ್ ಇಂಡಿಯಾ ಲಿಮಿಟೆಡ್ ಮತ್ತು NLC ಇಂಡಿಯಾ ಲಿಮಿಟೆಡ್‌ನ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಪ್ರಹ್ಲಾದ್ ಜೋಶಿಯವರು, ವೈವಿಧ್ಯೀಕರಣ ಯೋಜನೆಗಳಿಗೆ ವೇಗ ನೀಡುವಂತೆ ಸೂಚನೆ ನೀಡಿದರು. ಭಾರತದ ಹವಾಮಾನಕ್ಕೆ ಅನುಗುಣವಾಗಿ, ಲಿಗ್ನೈಟ್ ಕಂಪನಿಗಳು ನವೀಕರಿಸಬಹುದಾದ ಇಂಧನಕ್ಕೆ ಹೆಚ್ಚಿನ ಒತ್ತು ನೀಡಬೇಕಾಗಿದೆ. ಥರ್ಮಲ್ ಪವರ್ ಜೊತೆಗೆ ಕಲ್ಲಿದ್ದಲು ಗ್ಯಾಸಿಫಿಕೇಶನ್ ಯೋಜನೆ ಮಹತ್ವದ್ದು ಎಂದು ಅಧಿಕಾರಿಗಳಿಗೆ ಹೇಳಿದರು. ನ್ಯಾಚುರಲ್ ಗ್ಯಾಸ್ ಬೆಲೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಏರುತ್ತಲೇ ಇದೆ. ಹೀಗಿರುವಾಗ ಭಾರತ ಗ್ಯಾಸ್ ಉತ್ಪಾದನೆಯಲ್ಲಿ ಆತ್ಮನಿರ್ಭರತೆ ಹೊಂದಬೇಕು. ಕಲ್ಲಿದ್ದಲು ಮತ್ತು ಲಿಗ್ನೈಟ್ನಿಂದ ಗ್ಯಾಸ್ ತಯಾರಿಕೆ ಯೋಜನೆ ಕುರಿತು ಹೆಚ್ಚಿನ ಗಮನ ಹರಿಸುವಂತೆ ಪ್ರಹ್ಲಾದ್ ಜೋಶಿ ಅಧಿಕಾರಿಗಳಿಗೆ ಸೂಚನೆ ನೀಡಿದರು.