ಸಿದ್ದರಾಮಯ್ಯ ವಿರುದ್ಧ ಪ್ರಹ್ಲಾದ್ ಜೋಶಿ ವಾಗ್ದಾಳಿ

ಶುಕ್ರವಾರ, 30 ಸೆಪ್ಟಂಬರ್ 2022 (09:51 IST)
ನವದೆಹಲಿ : ಪಿಎಫ್ಐ ಮೇಲೆ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ಗೆ ಈಗಲೂ ಒಳಗೊಳಗೆ ಪ್ರೀತಿ ಇದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.

ಪಿಎಫ್ಐ ಬ್ಯಾನ್ ಕುರಿತಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಸುರಕ್ಷತೆ ವಿಚಾರದಲ್ಲಿ ಬಿಜೆಪಿ ಯಾವತ್ತು ಮತಬ್ಯಾಂಕ್ ರಾಜಕಾರಣ ಮಾಡಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಕೇಂದ್ರ ಬಿಜೆಪಿ ಸರ್ಕಾರ ಪಿಎಫ್ಐ ಬ್ಯಾನ್ ಮಾಡಿರುವುದನ್ನು ಕಂಡು ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಒಳಗೊಳಗೆ ಕುದಿಯುತ್ತಿದೆ. ಪಿಎಫ್ಐ ಭಯೋತ್ಪಾದಕ ಚಟುವಟಿಕೆಗಳು, ದೇಶದ್ರೋಹ ಕೃತ್ಯಗಳ ಬಗ್ಗೆ ಜನರಿಗೆ ಮಾಹಿತಿ ಇದೆ.

ಇಂಥಹ ಸಂದರ್ಭದಲ್ಲಿ ಪಿಎಫ್ಐ ಬ್ಯಾನ್ ಮಾಡಿರುವುದನ್ನು ವಿರೋಧಿಸಿದರೆ ಜನ ಒದೆಯುತ್ತಾರೆ ಅಷ್ಟೇ. ಪಿಎಫ್ಐ ಪರ ಮಾತನಾಡಿದರೆ  ಎಲ್ಲಿ ದೇಶದ ಜನರ ಕಂಗೆಣ್ಣಿಗೆ ಗುರಿಯಾಗಬೇಕಾಗುತ್ತದೆ ಎಂಬುದು ಕಾಂಗ್ರೆಸ್ಗೆ ಚಿಂತೆಯಾಗಿದೆ ಎಂದು ಹೇಳಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ