ಬಂಧನದ ಭಯದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಪ್ರಜ್ವಲ್‌

sampriya

ಬುಧವಾರ, 29 ಮೇ 2024 (16:22 IST)
ಬೆಂಗಳೂರು: ಮಹಿಳೆಯರಿಗೆ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್‌ ರೇವಣ್ಣ ಅವರು ಬಂಧನದ ಭಯದಲ್ಲಿ ಇಂದು ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಅಶ್ಲೀಲ ವಿಡಿಯೋ ವೈರಲ್‌ ಆಗುತ್ತಿದ್ದ ಬೆನ್ನಲ್ಲೇ ವಿದೇಶಕ್ಕೆ ಹೋಗಿರುವ ಪ್ರಜ್ವಲ್‌ ರೇವಣ್ಣ ಇದೇ 31ರಂದು ಬೆಂಗಳೂರಿಗೆ ಬರುವುದಾಗಿ ಹೇಳಿಕೊಂಡಿದ್ದಾರೆ.

ವಿಚಾರಣೆಗೆ ಎಸ್‌ಐಟಿಗೆ ಬೇಕಾಗಿರುವ ಪ್ರಜ್ವಲ್‌ ರೇವಣ್ಣ ಅವರನ್ನು ಏರ್‌ಪೋರ್ಟ್‌ನಲ್ಲಿ ವಶಕ್ಕೆ ಪಡೆಯಲು ಎಸ್‌ಐಟಿ ತಂಡ ಸಜ್ಜಾಗಿದೆ. ಇದೀಗ ಬಂಧನದಿಂದ ಪಾರಾಗಲು ಹಾಸನ ಸಂಸದ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್‌ ಮೊರೆ ಹೋಗಿದ್ದಾರೆ.

ಅವರು ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ತಮ್ಮ ವಿರುದ್ಧ ಸಿಐಡಿ ಠಾಣೆ, ಹೊಳೆನರಸೀಪುರ ಠಾಣೆ, ಸೈಬರ್ ಕ್ರೈಂ ಠಾಣೆಯಲ್ಲಿ ದಾಖಲಾದ ಮೂರು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಸಿದ್ದಾರೆ.

ಇದೀಗ ಅರ್ಜಿ ವಿಚಾರಣೆಯನ್ನು ನಾಳೆಯೇ  ಮಾಡುವಂತೆ ಪ್ರಜ್ವಲ್ ಪರ ವಕೀಲರು ಮನವಿ ಮಾಡಿದರು. ಆದರೆ ನಾಳೆ ವಿಚಾರಣೆ ಸಾಧ್ಯವಿಲ್ಲ ಎಂದ ಕೋರ್ಟ್, ಈ ಸಂಬಂಧ ಎಸ್ಐಟಿಗೆ ನೋಟಿಸ್ ನೀಡಿ, ವಿಚಾರಣೆಯನ್ನು ಮೇ 31ಕ್ಕೆ ನಿಗದಿಪಡಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ