ಪ್ರಜ್ವಲ್ ರೇವಣ್ಣ ವಿರುದ್ಧ ಭೂ ಕಬಳಿಕೆ ಆರೋಪ
ಸಚಿವ ಹೆಚ್.ಡಿ.ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ವಿರುದ್ಧ ಭೂ ಕಬಳಿಕೆ ಆರೋಪ ಕೇಳಿಬಂದಿದೆ.
ಬೆಂಗಳೂರಿನ ಭೂ ಕಬಳಿಕೆ ವಿಶೇಷ ನ್ಯಾಯಾಲಯ ಹಾಸನ ಡಿಸಿಯಿಂದ ಈ ಕುರಿತು ಮಾಹಿತಿ ಕೇಳಿದೆ.
ಜಿಲ್ಲಾಡಳಿತದವರು ನ್ಯಾಯಾಲಯಕ್ಕೆ ದಾಖಲೆ ಹಾಗೂ ಮಾಹಿತಿ ನೀಡುವ ನಂಬಿಕೆಯಿದೆ. ತಪ್ಪಿತಸ್ಥರ ವಿರುದ್ಧ ನ್ಯಾಯಾಲಯ ಶಿಸ್ತು ಕ್ರಮ ಕೈಗೊಳ್ಳುವ ವಿಶ್ವಾಸವಿದೆ ಎಂದು ಹಾಸನದಲ್ಲಿ ಮಾಜಿ ಸಚಿವ ಎ.ಮಂಜು ಹೇಳಿಕೆ ನೀಡಿದ್ದಾರೆ.
ಡಿಸಿ ನನಗೆ ಮಾಹಿತಿ ನೀಡಿರಲಿಲ್ಲ. ಆದರೆ ನ್ಯಾಯಾಲಯಕ್ಕೆ ಮಾಹಿತಿ ಕೊಡಲೇಬೇಕಿದೆ ಎಂದಿರುವ ಅವರು,
ಪ್ರಜ್ವಲ್ ರೇವಣ್ಣ ಹಾಸನ ತಾಲೂಕಿನಲ್ಲಿ 69,19 ಎಕರೆ ಭೂಮಿ ಕಬಳಿಸಿದ್ದಾರೆಂದು ದೂರು ನೀಡಿದ್ದಾರೆ. ಭೂ ಕಬಳಿಕೆ ವಿಶೇಷ ನ್ಯಾಯಾಲಯದಲ್ಲಿ ದೂರು ದಾಖಲಿಸಿ ಹೋರಾಟ ನಡೆಸುತ್ತಿರುವ ಮಂಜು, ಈ ಪ್ರಕರಣದಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುತ್ತಿದೆ ಎಂದು ಮಂಜು ಅಸಮಾಧಾನ ವ್ಯಕ್ತಪಡಿಸಿದ್ದಾರೆ.