ಪ್ರಜ್ವಲ್ ಅಶ್ಲೀಲ ವಿಡಿಯೋ ಪ್ರಕರಣ: ದೇವೇಗೌಡರ ಕುಟುಂಬ ರಾಜಕೀಯಕ್ಕೆ ರಾಜೀನಾಮೆಗೆ ವೀರಪ್ಪ ಮೊಹ್ಲಿ ಆಗ್ರಹ
ಮೋದಿ ಮತ್ತೆ ಅಧಿಕಾರಕ್ಕೆ ಬಂದರೆ ಒಂದು ದೇಶ, ಒಂದು ಚುನಾವಣೆ ಮತ್ತು ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬರಬಹುದು. 2029ರಲ್ಲಿ ಚುನಾವಣೆಯೇ ನಡೆಯುವುದಿಲ್ಲ ಎಂಬ ಭಯವೂ ನಮಗಿದೆ ಎಂದರು.
ಲೈಂಗಿಕ ದೌರ್ಜನ್ಯ ಆರೋಪದಡಿಯಲ್ಲಿ ಪ್ರಜ್ವಲ್ ರೇವಣ್ಣ ಹಾಗೂ ಅವರ ತಂದೆ ಮಾಜಿ ಸಚಿವ ಎಚ್ ಡಿ ರೇವಣ್ಣ ವಿರುದ್ಧ ಮಾಜಿ ಮನೆ ಕೆಲಸದಾಕೆ ದೂರನ್ನು ನೀಡಿದ್ದಾರೆ. ಇದೀಗ ಎಸ್‌ಐಟಿ ಈ ತನಿಖೆಯನ್ನು ವಹಿಸಿಕೊಂಡಿದ್ದು, ಪ್ರಜ್ವಲ್ ರೇವಣ್ಣ ಹಾಗೂ ಎಚ್ ಡಿ ರೇವಣ್ಣ ಕೂಡಲೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.