ಪ್ರಜ್ವಲ್ ರೇವಣ್ಣಗೆ 6 ದಿನ ಎಸ್‌ಐಟಿ ಕಸ್ಟಡಿ: ತನಿಖೆಗೆ ಸ್ಪಂದಿಸುವಂತೆ ನ್ಯಾಯಾಲಯ ಸೂಚನೆ
ಗಂಭೀರ ಆರೋಪಗಳನ್ನು ಹೊತ್ತಿರುವ ಅವರ ತನಿಖೆಗಾಗಿ ಎಸ್‌ಐಟಿ ತನ್ನ ಕಸ್ಟಡಿಗೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿತ್ತು. ಅದನ್ನು ನ್ಯಾಯಾಧೀಶರು ಪುರಸ್ಕರಿಸಿದ್ದಾರೆ.
ಬೆಂಗಳೂರಿನ 42ನೇ ಎಸಿಎಮ್ಸಿ ನ್ಯಾಯಾಲಯ ಈ ಆದೇಶ ಹೊರಡಿಸಿದ್ದು ಪ್ರಜ್ವಲ್ ಅವರಿಗೆ ಯಾವುದೇ ಕಿರುಕುಳ ನೀಡದಂರೆ ಎಸ್‌ಐಟಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಅದಲ್ಲದೆ ಪ್ರಜ್ವಲ್ ರೇವಣ್ಣ ಅವರಿಗೆ ತನಿಖೆ ಸ್ಪಂದಿಸುವಂತೆ ಸೂಚನೆ ನೀಡಿದ್ದಾರೆ.