ಚಿಕ್ಕಪ್ಪ ಕುಮಾರಸ್ವಾಮಿ ಬಗ್ಗೆ ಪ್ರಜ್ವಲ್ ರೇವಣ್ಣ ಹೇಳಿದ್ದೇನು?
ಗುರುವಾರ, 8 ಮಾರ್ಚ್ 2018 (11:43 IST)
ಬೆಂಗಳೂರು: ಈ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತಾಗಿ ಚಿಕ್ಕಪ್ಪ ಎಚ್ ಡಿ ಕುಮಾರಸ್ವಾಮಿ ಜತೆ ವೈಮನಸ್ಯ ಮಾಡಿಕೊಂಡಿದ್ದ ಪ್ರಜ್ವಲ್ ರೇವಣ್ಣ ಇದೀಗ ತಮ್ಮ ಸ್ಪರ್ಧೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ನನಗಾಗಲೀ, ಕುಮಾರಸ್ವಾಮಿಯವರಿಗಾಗಲೀ ಯಾವುದೇ ಗೊಂದಲವಿಲ್ಲ. ನಾನು ಚುನಾವಣೆಗೆ ಸ್ಪರ್ಧಿಸುತ್ತೇನೋ ಇಲ್ವೋ.. ನನ್ನ ಹೆಸರು 2 ನೇ ಪಟ್ಟಿಯಲ್ಲೂ ನನ್ನ ಹೆಸರು ಇರುತ್ತೋ ಇಲ್ವೋ ಗೊತ್ತಿಲ್ಲ. ಆದರೆ ಟಿಕೆಟ್ ಕೊಟ್ಟರೆ ಸ್ಪರ್ಧೆ ಮಾಡುತ್ತೇನೆ. ಇಲ್ಲವಾದರೆ ಪಕ್ಷದ ಪರ ಕೆಲಸ ಮಾಡುತ್ತೇನೆ ಎಂದಿದ್ದಾರೆ.
ನಮ್ಮ ಗುರಿ ಆರ್ ಆರ್ ನಗರ ಕ್ಷೇತ್ರದಿಂದ ಮುನಿರತ್ನಂ ಅವರನ್ನು ಓಡಿಸಬೇಕು. ಜೆಡಿಎಸ್ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂಬುದು ಎಂದು ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ