ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ: ಇಲ್ಲಿದೆ ಡೀಟೈಲ್ಸ್

Krishnaveni K

ಶನಿವಾರ, 2 ಆಗಸ್ಟ್ 2025 (16:23 IST)
ಬೆಂಗಳೂರು: ಮನೆಗೆಲಸದಾಕೆ ಮೇಲೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಜೊತೆಗೆ 10 ಲಕ್ಷ ರೂ. ದಂಡ ಶಿಕ್ಷೆ ಪ್ರಕಟಿಸಲಾಗಿದೆ.

ಇಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಪ್ರಜ್ವಲ್ ಶಿಕ್ಷೆ ಪ್ರಮಾಣವನ್ನು ಪ್ರಕಟಿಸಿತು. ನಿನ್ನೆಯೇ ಪ್ರಜ್ವಲ್ ಈ ಪ್ರಕರಣದಲ್ಲಿ ದೋಷಿ ಎಂದು ನ್ಯಾ. ಸಂತೋಷ್ ಗಜಾನನ ಭಟ್ ತೀರ್ಪು ನೀಡಿದ್ದರು. ಇಂದು ಶಿಕ್ಷೆ ಪ್ರಮಾಣ ಪ್ರಕಟಿಸುವುದಾಗಿ ಹೇಳಿದ್ದರು. ಅದರಂತೆ ಈಗ ಶಿಕ್ಷೆ ಪ್ರಮಾಣ ಪ್ರಕಟಿಸಲಾಗಿದೆ. ಜೀವಾವಧಿ ಶಿಕ್ಷೆ ಜೊತೆಗೆ ಒಟ್ಟು 10 ಲಕ್ಷ ರೂ. ದಂಡ ವಿಧಿಸಲಾಗಿದೆ. ಇದರಲ್ಲಿ ಸಂತ್ರಸ್ತೆಗೆ 7 ಲಕ್ಷ ರೂ. ಸಂತ್ರಸ್ತೆಗೆ ನೀಡಬೇಕಾಗಿದೆ.

ತೀರ್ಪು ಸಂಬಂಧ ನಿನ್ನೆ ಪ್ರಜ್ವಲ್ ರನ್ನು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಇಂದೂ ಶಿಕ್ಷೆ ಪ್ರಮಾಣವನ್ನು ಪ್ರಕಟಿಸುವಾಗಲೂ ಅವರನ್ನು ನ್ಯಾಯಾಲಯಕ್ಕೆ ಖುದ್ದು ಹಾಜರುಪಡಿಸಲಾಗಿತ್ತು. ನಿನ್ನೆ ದೋಷಿ ಎಂದು ತೀರ್ಪು ನೀಡುತ್ತಿದ್ದಂತೇ ಪ್ರಜ್ವಲ್ ಭಾವುಕರಾಗಿದ್ದರು. ಇಂದೂ ಕೂಡಾ ಶಿಕ್ಷೆ ಪ್ರಕಟವಾಗುತ್ತಿದ್ದಂತೇ ಪ್ರಜ್ವಲ್ ಕುಸಿದು ಕೂತಿದ್ದಾರೆ. ಇದೀಗ ಇಂದಿನಿಂದಲೇ ಪ್ರಜ್ವಲ್ ಜೈಲು ಶಿಕ್ಷೆ ಗಣನೆಗೆ ಬರಲಿದೆ. ಇದುವರೆಗೆ ಅವರು ಅರೆಸ್ಟ್ ಆಗಿರಲಿಲ್ಲ. ಬಾಡಿ ವಾರೆಂಟ್ ಪಡೆದು ಆತನನ್ನು ವಶಕ್ಕೆ ಪಡೆಯಲಾಗಿತ್ತು.

ನ್ಯಾಯಾಧೀಶರು ಶಿಕ್ಷೆ ಪ್ರಮಾಣ ಘೋಷಿಸುವ ಮೊದಲು ಪ್ರಜ್ವಲ್ ರೇವಣ್ಣಗೆ ಮಾತನಾಡಲು ಅವಕಾಶ ನೀಡಲಾಯಿತು. ಈ ವೇಳೆ ಪ್ರಜ್ವಲ್ ಬಿಕ್ಕಿ ಬಿಕ್ಕಿ ಅತ್ತರು. ನಾನು ಮೆರಿಟ್ ವಿದ್ಯಾರ್ಥಿ. ಅದನ್ನು ಪರಿಗಣಿಸಿ ಎಂದು ಬೇಡಿಕೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ