ಬೆಂಗಳೂರು : ಅಸಿಂಧು ಆದೇಶಕ್ಕೆ ತಾತ್ಕಾಲಿಕ ರಿಲೀಫ್ ಕೋರಿದ್ದ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಬಿಗ್ ಶಾಕ್ ನೀಡಿದೆ.
ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೆ. ನಟರಾಜನ್ ಪೀಠ ಅರ್ಜಿಯನ್ನು ವಜಾ ಮಾಡಿ ಆದೇಶ ನೀಡಿದೆ. ಸುಪ್ರೀಂಕೋರ್ಟ್ಗೆ ಹೋಗಿ, ಮೇಲ್ಮನವಿ ಸಲ್ಲಿಸಲು ಕಾಲಾವಕಾಶ ಬೇಕಾಗಿದೆ.
ಮಧ್ಯಂತರ ಆದೇಶ ಪಡೆದರೆ ಮಾತ್ರ ಸಂಸತ್ ಕಲಾಪದಲ್ಲಿ ಭಾಗವಹಿಸಬಹುದು. ಹೀಗಾಗಿ ಆದೇಶಕ್ಕೆ ತಾತ್ಕಾಲಿಕ ತಡೆ ನೀಡಬೇಕೆಂದು ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಸಿದ್ರು.
ಪ್ರಜ್ವಲ್ ರೇವಣ್ಣ ಪರ ಹಿರಿಯ ವಕೀಲ ಉದಯ್ ಹೊಳ್ಳ ವಾದ ಮಂಡನೆ ಮಾಡಿದ್ರು. ಇದಕ್ಕೆ ಆಕ್ಷೇಪಣೆ ಸಲ್ಲಿಸಿದ ದೂರುದಾರ ದೇವರಾಜೇಗೌಡ, ಅರ್ಜಿ ವಜಾಗೊಳಿಸುವಂತೆ ಮನವಿ ಮಾಡಿದ್ರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ತಾತ್ಕಾಲಿಕ ರಿಲೀಫ್ ನೀಡಲು ನಿರಾಕರಿಸಿ, ಅರ್ಜಿ ವಜಾಗೊಳಿಸಿದೆ.