ರಾಜಕೀಯಕ್ಕೆ ಅಧಿಕೃತ ಎಂಟ್ರಿ ಪಡೆದ ಎಚ್‌.ಡಿ,.ರೇವಣ್ಣ ಪುತ್ರ

ಸೋಮವಾರ, 27 ನವೆಂಬರ್ 2017 (18:50 IST)
ದೇವೇಗೌಡರ ಕುಟುಂಬದ ಮತ್ತೊಂದು ಕುಡಿ ರಾಜಕೀಯ ಪ್ರವೇಶಿಸಿದೆ.ಮಾಜಿ ಸಚಿವ ಎಚ್.ಡಿ.ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣರನ್ನು ಜೆಡಿಎಸ್ ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಮೊಮ್ಮಗ ಪ್ರಜ್ವಲ್ ರೇವಣ್ಣನಿಗೆ ನೇಮಕಾತಿ ಪತ್ರ ನೀಡಿ ಆಶೀರ್ವದಿಸಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಪಕ್ಷವನ್ನು ಸಂಘಟಿಸಲು ಶ್ರಮಿಸುವಂತೆ ಆದೇಶ ನೀಡಿದ್ದಾರೆ.
 
ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವ ಬಯಕೆಯನ್ನು ಈಗಾಗಲೇ ವ್ಯಕ್ತಪಡಿಸಿರುವ ಪ್ರಜ್ವಲ್, ತಮ್ಮ ಹೇಳಿಕೆಗಳ ವಿವಾದಗಳಿಂದಾಗಿ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಕೆಂಗೆಣ್ಣಿಗೆ ಗುರಿಯಾಗಿದ್ದರು. 
 
ಎಚ್.ಡಿ. ರೇವಣ್ಣ ಅವರ ಪುತ್ರರಾಗಿರುವ ರೇವಣ್ಣ ಅವರಿಗೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಸಿಗುವ ಸಾಧ್ಯತೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ