ತಪ್ಪು ಸಾಬೀತಾದರೆ ಪ್ರಜ್ವಲ್‌ಗೆ ಶಿಕ್ಷೆಯಾಗಲಿ: ಎಚ್ ಡಿ ದೇವೇಗೌಡ

Sampriya

ಶನಿವಾರ, 18 ಮೇ 2024 (14:57 IST)
Photo Courtesy X
ಬೆಂಗಳೂರು:  ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಪ್ರಜ್ವಲ್ ರೇವಣ್ಣ ತಪ್ಪು ಮಾಡಿರುವುದು ಸಾಬೀತಾದರೆ ಕಾನೂನು ಪ್ರಕಾರ ಕ್ರಮ ಜರುಗಿಸಲಿ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಹೇಳಿದರು.

92ನೇ ಹುಟ್ಟು ಹಬ್ಬವನ್ನು ಆಚರಿಸುತ್ತಿರುವ ದೇವೇಗೌಡ ಅವರು ಮಾಧ್ಯಮದ ಜತೆ ಮಾತನಾಡಿದ ಅವರು ಮೊಮ್ಮಗ ಪ್ರಜ್ವಲ್ ರೇವಣ್ಣ ಮತ್ತು ಮಗ ಎಚ್.ಡಿ. ರೇವಣ್ಣ ವಿರುದ್ಧದ ಆರೋಪಗಳ ಕುರಿತು ಪ್ರತಿಕ್ರಿಯಿಸಿದರು.

ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಆರೋ‍ಪಗಳು ಸಾಬೀತಾದರೆ ಸರ್ಕಾರ ಕಠಿಣ ಕ್ರಮ ಜರುಗಿಸಲಿ ಎಂದರು.

ಎಚ್.ಡಿ.‌ರೇವಣ್ಣ ವಿರುದ್ಧದ ಪ್ರಕರಣವನ್ನು ಸೃಷ್ಟಿಸಲಾಗಿದೆ. ಅದರ ಹಿಂದೆ ಯಾರಿದ್ದಾರೆ ಎಂಬುದನ್ನು ಈಗ‌ ಮಾತನಾಡುವುದಿಲ್ಲ. ಒಂದು ಪ್ರಕರಣದಲ್ಲಿ ರೇವಣ್ಣ ಅವರಿಗೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಮತ್ತೊಂದು ಪ್ರಕರಣದಲ್ಲಿ ಜಾಮೀನು ಅರ್ಜಿಯ ವಿಚಾರಣೆ ಪ್ರಗತಿಯಲ್ಲಿದೆ. ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ