ಪ್ರಜ್ವಲ್ ಕೇಸ್ ನಲ್ಲಿ ರೇವಣ್ಣ ಮತ್ತು ಸಿದ್ದರಾಮಯ್ಯ ನಡುವೆ ಒಪ್ಪಂದವಾಗಿದೆ: ಜೋಶಿ ಗಂಭೀರ ಆರೋಪ

Krishnaveni K

ಮಂಗಳವಾರ, 30 ಏಪ್ರಿಲ್ 2024 (11:56 IST)
ಬೆಂಗಳೂರು: ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಕೇಸ್ ನಲ್ಲಿ ಎಚ್ ಡಿ ರೇವಣ್ಣ ಮತ್ತು ಸಿಎಂ ಸಿದ್ದರಾಮಯ್ಯ ನಡುವೆ ಒಪ್ಪಂದವಾಗಿದೆ ಎಂದು ಬಿಜೆಪಿ ಸಂಸದ ಪ್ರಹ್ಲಾದ್ ಜೋಶಿ ಗಂಭೀರ ಆರೋಪ ಮಾಡಿದ್ದಾರೆ.

ಪ್ರಕರಣ ಬಯಲಿಗೆ ಬರುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಜರ್ಮನಿಗೆ ಹಾರಿದ್ದಾರೆ. ಅವರನ್ನು ಜರ್ಮನಿಗೆ ತೆರಳಲು ಬಿಟ್ಟಿದ್ದು ಕೇಂದ್ರ ಸರ್ಕಾರ ಎಂದು ಕಾಂಗ್ರೆಸ್ ನಾಯಕರು ಆರೋಪಿಸುತ್ತಿದ್ದಂತೇ ಇತ್ತ ಪ್ರಹ್ಲಾದ್ ಜೋಶಿ ತಿರುಗೇಟು ನೀಡಿದ್ದಾರೆ. ರೇವಣ್ಣ ಮತ್ತು ಸಿದ್ದರಾಮಯ್ಯ ನಡುವೆ ಒಪ್ಪಂದ ಆಗಿದೆ ಎಂದಿದ್ದಾರೆ.

ಪ್ರಜ್ವಲ್ ರೇವಣ್ಣ ಬಗ್ಗೆ ಆರೋಪ ಕೇಳಿ ಬರುತ್ತಿದ್ದಂತೇ ಅವರ ವಿರುದ್ಧ ಎಫ್ ಐಆರ್ ದಾಖಲಿಸಲಿಲ್ಲವೇಕೆ? ಅವರನ್ನು ವಿದೇಶಕ್ಕೆ ಓಡಿ ಹೋಗಲು ಅವಕಾಶ ಮಾಡಿಕೊಟ್ಟಿದ್ದು ರಾಜ್ಯ ಕಾಂಗ್ರೆಸ್ ಸರ್ಕಾರ. ಈ ಬಗ್ಗೆ ರೇವಣ್ಣ ಮತ್ತು ಸಿದ್ದರಾಮಯ್ಯ ನಡುವೆ ಒಪ್ಪಂದ ಆಗಿದೆ. ಇಲ್ಲಿ ದೂರು ದಾಖಲಾದರೆ ಕೇಂದ್ರ ಸರ್ಕಾರಕ್ಕೆ ಕನಸು ಬೀಳುತ್ತದೆಯೇ? ಪ್ರಜ್ವಲ್ ರೇವಣ್ಣ ಪ್ರಕರಣದಿಂದ ನಮಗೇನೂ ನಷ್ಟವಿಲ್ಲ. ನಾವು ಪ್ರಜ್ವಲ್ ನನ್ನು ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ತಪ್ಪು ಮಾಡಿದವರಿಗೆ ಕಾನೂನು ಪ್ರಕಾರ ಶಿಕ್ಷೆಯಾಗುತ್ತದೆ. ರೇವಣ್ಣ ಮತ್ತು ಸಿದ್ದರಾಮಯ್ಯ ನಡುವೆ ಒಪ್ಪಂದ ಆಗಿದೆ ಎಂದು ಜನರೇ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ