ಪ್ರಸಾದ ಸೇವನೆ: 50ಕ್ಕೂ ಹೆಚ್ಚು ಜನ ಅಸ್ವಸ್ಥ!
ಹಳ್ಳಿಯ ಗಂಗಮ್ಮ ದೇವಾಲಯದಲ್ಲಿ ಶನಿವಾರ ಹೊಸ ವರ್ಷಾಚರಣೆಯ ಅಂಗವಾಗಿ ವಿಶೇಷ ಪೂಜೆ ನಡೆದಿತ್ತು. ನಂತರದಲ್ಲಿ ದೇವಾಲಯದ ಆಡಳಿತ ಮಂಡಳಿ ಮಾಡಿಸಿದ ಪ್ರಸಾದವನ್ನು ಭಕ್ತರಿಗೆ ವಿತರಿಸಲಾಗಿದೆ.
ಪ್ರಸಾದದ ರೂಪದಲ್ಲಿ ಚಿತ್ರಾನ್ನ ಹಾಗೂ ಕೇಸರಿಬಾತ್ ಸೇವಿಸಿದ ಭಕ್ತರು ಅಸ್ವಸ್ಥಗೊಂಡಿದ್ದಾರೆ. 50ಕ್ಕೂ ಹೆಚ್ಚು ಜನರನ್ನು ಶ್ರೀನಿವಾಸಪುರ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.