ಪೊಲೀಸ್ ಆಯುಕ್ತರಾಗಿ ಪ್ರತಾಪ್ ರೆಡ್ಡಿ ನೇಮಕ
ಇದುವರೆಗೂ ಕಮಿಷನರ್ ಸ್ಥಾನದಲ್ಲಿದ್ದ ಕಮಲ್ ಪಂತ್ ಅವರನ್ನು ಬೆಂಗಳೂರು ನೇಮಕಾತಿ ವಿಭಾಗದ ಡಿಜಿಯಾಗಿ ವರ್ಗಾಯಿಸಲಾಗಿದೆ.
1991 ರ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿರುವ ಪ್ರತಾಪ್ ರೆಡ್ಡಿ, ಆಂಧ್ರಪ್ರದೇಶದ ಗುಂಟೂರು ಮೂಲದವರು. ಬೆಂಗಳೂರಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿ ಕೆಲಸ ಮಾಡಿದ್ದರು.
ಕಾನೂನು ಸುವ್ಯವಸ್ಥೆ ಎಡಿಜಿಪಿ ಹುದ್ದೆಯಿಂದ ಬೆಂಗಳೂರು ಪೊಲೀಸ್ ಆಯುಕ್ತರಾಗಿ ವರ್ಗಾವಣೆಗೊಂಡಿದ್ದಾರೆ. ಕಾನೂನು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ ಅಲೋಕ್ ಕುಮಾರ್ ನಿಯುಕ್ತಿಗೊಂಡಿದ್ದಾರೆ.