ಚನ್ನಪಟ್ಟಣಕ್ಕೆ ಪ್ರತಾಪ್ ಸಿಂಹ ಮೈತ್ರಿ ಅಭ್ಯರ್ಥಿ, ಹೀಗೊಂದು ಚರ್ಚೆ

Sampriya

ಬುಧವಾರ, 18 ಸೆಪ್ಟಂಬರ್ 2024 (19:07 IST)
Photo Courtesy X
ಬೆಂಗಳೂರು: ರಾಜ್ಯದಲ್ಲಿ ಖಾಲಿಯಾದ ಮೂರು ವಿಧಾನಸಭಾ ಕ್ಷೇತ್ರಗಳ ಪೈಕಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಭಾರೀ ಕುತೂಹಕ್ಕೆ ಕಾರಣವಾಗಿದೆ. ಈ ಕ್ಷೇತ್ರದ ಗೆಲುವಿಗಾಗಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಬಾರೀ ಪೈಪೋಟಿ ಏರ್ಪಟ್ಟಿದೆ.

ಇಲ್ಲಿ ಸ್ಪರ್ಧೆಗೆ ಇಳಿಯುವ ಅಭ್ಯರ್ಥಿಗಳ ಬಗ್ಗೆ ಈಗಾಗಲೇ ಲೆಕ್ಕಚಾರ ಶುರುವಾಗಿದೆ. ಈಗಾಗಲೇ ನಿಖಿಲ್ ಕುಮಾರಸ್ವಾಮಿ ಹಾಗೂ ಸಿಪಿ ಯೋಗೇಶ್ವರ್ ಹೆಸರು ಮುನ್ನೆಲೆಗೆ ಇದೆ. ಆದರೆ ಇದೀಗ ರಾಜಕೀಯ ವಲಯದಲ್ಲಿ ಪ್ರತಾಪ್ ಸಿಂಹ ಹೆಸರು ಕೇಳಿಬರುತ್ತಿದೆ.

ಸಿಕ್ಕ ಮಾಹಿತಿ ಪ್ರಕಾರ ಪ್ರತಾಪ್ ಸಿಂಹ ಅವರು ಮೈತ್ರಿ ಅಭ್ಯರ್ಥಿಯಾಗಿ ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಯಲ್ಲಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆಂಬ ಸುದ್ದಿಯಿದೆ.  ಇನ್ನೂ ಕಾಂಗ್ರೆಸ್ ವಲಯದಲ್ಲೂ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆ ಜೋರಾಗಿದೆ.

ಇದೀಗ ಲೋಕಸಭೆಯಲ್ಲಿ ಬಿಜೆಪಿ - ಜೆಡಿಸ್ ಮೈತ್ರಿ ಅಭ್ಯರ್ಥಿಯಾಗಿ ಗೆಲುವು ಸಾಧಿಸಿ ಸಂಸತ್ತಿಗೆ ಹೋಗಿದ್ದರಿಂದ ಚನ್ನಪಟ್ಟಣದ ಮೈತ್ರಿ ಟಿಕೆಟ್ ಅನ್ನು ಯಾರಿಗೆ ನೀಡಬೇಕು ಎಂಬ ಕುತೂಹಲ ಉಂಟಾಗಿದೆ.

ಜೆಡಿಎಸ್ ಪಕ್ಷದಿಂದ ಗೆದ್ದ ಕ್ಷೇತ್ರವನ್ನು ಮೈತ್ರಿ ಧರ್ಮ ಪಾಲಿಸುವುದಕ್ಕಾಗಿ ಬಿಜೆಪಿಗೆ ಬಿಟ್ಟು ಕೊಡಲು ಒಪ್ಪುತ್ತಿಲ್ಲ. ಆದರೆ, ಇಲ್ಲಿ ಬಿಜೆಪಿ ನಾಯಕ ಸಿ.ಪಿ. ಯೋಗೇಶ್ವರ ಮೈತ್ರಿ ಟಿಕೆಟ್ ತನಗೇ ಕೊಡಬೇಕು ಎಂದು ಪಟ್ಟು ಹಿಡಿದಿದ್ದು, ಇದರ ಬೆನ್ನಲ್ಲೇ ಪ್ರತಾಪ್ ಸಿಂಹ ಅವರ ಹೆಸರು ಕೇಳಿಬರುತ್ತಿದ್ದು ಕುತೂಹಲ ಹೆಚ್ಚು ಮಾಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ