ಫೇಸ್ ಬುಕ್ ಲೈವ್ ನಲ್ಲಿ ಕಣ್ಣೀರು ಹಾಕಿದ ಪ್ರತಾಪ್ ಸಿಂಹ

Krishnaveni K

ಮಂಗಳವಾರ, 12 ಮಾರ್ಚ್ 2024 (09:51 IST)
ಬೆಂಗಳೂರು: ಈ ಬಾರಿ ಮೈಸೂರು-ಕೊಡಗು ಕ್ಷೇತ್ರದಿಂದ ಟಿಕೆಟ್ ಕೈ ತಪ್ಪುವ ವದಂತಿ ಬೆನ್ನಲ್ಲೇ ಫೇಸ್ ಬುಕ್ ಲೈವ್ ಬಂದ ಹಾಲಿ ಸಂಸದ ಪ್ರತಾಪ್ ಸಿಂಹ ಫೇಸ್ ಬುಕ್ ಲೈವ್ ಬಂದು ಕಣ್ಣೀರು ಹಾಕಿದ್ದಾರೆ.

ಫೇಸ್ ಬುಕ್ ನಲ್ಲಿ ಲೈವ್ ಬಂದ ಪ್ರತಾಪ್ ಸಿಂಹ ಕ್ಷೇತ್ರದ ಜನತೆಗೆ ಧನ್ಯವಾದ ಹೇಳಿದ್ದಾರೆ. ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು ಎನ್ನುತ್ತಾ ಅವರು ಭಾವುಕರಾಗಿದ್ದಾರೆ. ಈ ಮೂಲಕ ತಮಗೆ ಟಿಕೆಟ್ ಕೈ ತಪ್ಪುವ ಸುಳಿವು ಅವರಿಗೇ ಸಿಕ್ಕಿದಂತಿದೆ. ಹೀಗಾಗಿ ಲೈವ್ ನಲ್ಲಿ ಮಾತನಾಡುವಾಗ ಭಾವುಕರಾದರು.

ಸ್ವಾರ್ಥಕ್ಕಾಗಿ ನಾನು ಯಾರ ಮನೆ ಬಾಗಿಲು ತಟ್ಟಿಲ್ಲ. ಟಿಕೆಟ್ ಸಿಗುತ್ತೋ ಇಲ್ವೋ ಚಾಮುಂಡೇಶ್ವರಿ ದೇವಿ ನಿರ್ಧರಿಸುತ್ತಾಳೆ. ನನ್ನ ಏಳಿಗೆಗೆ ಶ್ರಮಿಸಿದ್ದ ಪ್ರತಿಯೊಬ್ಬರಿಗೂ ಧನ್ಯವಾದ. ಮಡಿಕೇರಿಯ ಜನರು ನೇರ ಮತ್ತು ನಿಷ್ಠುರವಾದಿಗಳು. ಇಲ್ಲಿರುವಷ್ಟು ರಾಜಕಾರಣ ಎಲ್ಲೂ ನೋಡಿಲ್ಲ.  ಜನರ ಮಧ್ಯೆ ಇರುವರಿಗೆ ಪಕ್ಷ ಟಿಕೆಟ್ ನೀಡಬೇಕು. ನನ್ನಿಂದ ಯಾರೂ ಸಹ ಸೋತಿಲ್ಲ. ನನ್ನ ವಿರುದ್ಧ ಏಕೆ ಇಲ್ಲ ಸಲ್ಲದ ಆರೋಪ ಮಾಡುತ್ತೀರಿ? ಕ್ಷೇತ್ರದಾಚೆಗೂ ಜನ ಪ್ರೀತಿ ವಿಶ್ವಾಸ ತೋರಿಸುತ್ತಿದ್ದಾರೆ. ಈಗಲೂ ಪಕ್ಷ ಟಿಕೆಟ್ ಕೊಡುತ್ತದೆ ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ಇದೇ ನನ್ನ ಕೊನೆಯ ಚುನಾವಣೆ ಎಂದು ಹೇಳಿದ್ದೆ. ಪ್ರಧಾನಿ ಮೋದಿ ಇರುವರೆಗೂ ಇರುತ್ತೇನೆ ಹೇಳಿದ್ದೆ. ನನ್ನಂಥ ವ್ಯಕ್ತಿಗೆ ಟಿಕೆಟ್‍ ಕೊಡಬಹುದು ಎಂದು ನಿರೀಕ್ಷಿಸಿದ್ದೆ. ಆದರೆ ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು. ಮೋದಿಯಂಥ ಮೋದಿಯೇ ಗೌಣವಾಗಿದ್ದರು. ಸೂರ್ಯನಿಗೇ ಗ್ರಹಣ ಬಡಿಯುತ್ತದೆ. ಇನ್ನು ನಾನ್ಯಾರು? ನಾನು ಈಗ ಎಂಪಿ ಆಗಿದ್ದೀನಿ. ಎಂಪಿ ಆಗಿಯೇ ಸಾಯುವುದಿಲ್ಲ. ನನ್ನ ನಸೀಬು ಕೆಟ್ಟರೆ ಏನು ಬೇಕಾದರೂ ಆಗಬಹುದು. 10 ವರ್ಷ ಅವಕಾಶ, ಪ್ರೀತಿ ಕೊಟ್ಟು ನನ್ನನ್ನು ಬೆಂಬಲಿಸಿದ್ದಕ್ಕೆ ಧನ್ಯಾದಗಳು ಎಂದು ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ