ದೆಹಲಿಯಲ್ಲಿ ಪ್ರತಾಪ್ ಸಿಂಹಗೆ ಬ್ಲೂ ಬಾಯ್‌ ಎನ್ನುತ್ತಾರೆ: ಎಂ ಲಕ್ಷ್ಮಣ್ ಹೊಸ ಬಾಂಬ್‌

Sampriya

ಭಾನುವಾರ, 10 ಆಗಸ್ಟ್ 2025 (17:27 IST)
Photo Credit X
ಮಡಿಕೇರಿ: ಮಾಜಿ ಸಂಸದ ಪ್ರತಾಪ್ ಸಿಂಹ್‌ ಅವರ ಮೊಬೈಲ್‌ ಫೋನ್‌ ಅನ್ನು ತನಿಖೆ ನಡೆಸಿದ್ದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಣತೆ ಅವರಿಗೂ ಜೈಲು ಶಿಕ್ಷೆಯಾಗಲಿದೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಅವರು ಹೊಸ ಬಾಂಬ್ ಸಿಡಿಸಿದ್ದಾರೆ.

ಮಡಿಕೇರಿಯಲ್ಲಿ ಮಾತಾನಾಡಿದ ಅವರು, 2023ರಲ್ಲಿ ಸಂಸತ್ತಿನ ಭದ್ರತಾ ಉಲ್ಲಂಘನೆ ಘಟನೆ ಬಳಿಕ ಪ್ರತಾಪ್ ಸಿಂಹ ಅವರ ಫೋನ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಈ ವೇಳೆ ಪ್ರತಾಪ್ ಸಿಂಹ ಮೊಬೈಲ್‌ನಲ್ಲಿ ನಗ್ನ ಚಿತ್ರಗಳು, ನಗ್ನ ವೀಡಿಯೋಗಳು ಸಿಕ್ಕಿದ್ದವು. ಇದನ್ನು ನೋಡಿಅಮಿತ್ ಶಾ ಅವರೇ ದಿಗ್ಭ್ರಮೆಗೊಂಡಿದ್ದರು. ಈ ಬಗ್ಗೆ ನನ್ನ ಬಳಿ ಆಧಾರಗಳಿವೆ ಎಂದು ಹೇಳಿದ್ದಾರೆ. 

ಪ್ರಜ್ವಲ್ ರೇವಣ್ಣ ರೀತಿಯಲ್ಲಿಯೇ ಪ್ರತಾಪ್ ಸಿಂಹ ಅವರ ಮೊಬೈಲ್‌ನಲ್ಲಿ ವೀಡಿಯೋಗಳಿವೆ. ಅಂತಹ ವಿಡಿಯೋ ಇರುವುದಕ್ಕೆ ಗೃಹ ಸಚಿವರು ಪ್ರತಾಪ್ ಸಿಂಹ ಮೊಬೈಲ್ ಸೀಜ್‌ ಮಾಡಿಸಿದ್ದರು. 
ಪ್ರತಾಪ್ ಸಿಂಹ ಅವರ ಅಶ್ಲೀಲ ವಿಡಿಯೋಗಳು ನನ್ನ ಮೊಬೈಲ್‌ನಲ್ಲೇ ಇವೆ, ಮೊಬೈಲ್‌ನಲ್ಲಿರುವ ವಿಡಿಯೋಗಳನ್ನು ನೋಡಿದ ನಂತರವೇ ಬಿಜೆಪಿ ನಾಯಕರು ಪ್ರತಾಪ್ ಸಿಂಹಗೆ ಲೋಕಸಭಾ ಟಿಕೆಟ್ ನೀಡಲು ಅಡ್ಡ ಬಂದಿದ್ದರು.  

ಈ ರೀತಿಯ ಪ್ರತಾಪ್ ಸಿಂಹಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಲ್ಲಿಕಾರ್ಜುನ ಖರ್ಗೆ ಪ್ರದೀಪ್ ಈಶ್ವರ್ ಸೇರಿದಂತೆ ಹಲವಾರು ನಾಯಕರಿಗೆ ಬೈಯೋದೆ ಇವನ ಕೆಲಸವಾಗಿದೆ‌. ದೆಹಲಿಯಲ್ಲಿ ಇವರಿಗೆ ಬ್ಲೂ ಬಾಯ್‌ ಎನ್ನುತ್ತಾರೆಂದು ಲೇವಡಿ ಮಾಡಿದ್ದಾರೆ. 



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ