ನ್ಯಾಯಾಧೀಶರಿಗೆ ಪ್ರತಾಪ್ ಸಿಂಹ ಧನ್ಯವಾದ

ಸೋಮವಾರ, 1 ಜನವರಿ 2024 (17:42 IST)
ಸಹೋದರ ವಿಕ್ರಂ ಸಿಂಹಗೆ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ಸಂಸದ ಪ್ರತಾಪ್ ಸಿಂಹ ನ್ಯಾಯಾಧೀಶರಿಗೆ ಧನ್ಯವಾದಗಳನ್ನು ಸಮರ್ಪಿಸಿದ್ದಾರೆ. ಈ ಸಂಬಂಧ ತನ್ನ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ತಮ್ಮ ಬೆನ್ನಿಗೆ ನಿಂತ ಎಲ್ಲರಿಗೂ ಹಾಗೂ ನ್ಯಾಯಾಧೀಶರಿಗೂ ಧನ್ಯವಾದಗಳು ಎಂದಿದ್ದಾರೆ.

ನನ್ನ ತಮ್ಮ ತಲೆಮರೆಸಿಕೊಳ್ಳುವ ಯಾವ ಕೆಲಸವನ್ನೂ ಮಾಡಿಲ್ಲ. ತಲೆಮರೆಸಿಕೊಳ್ಳುವವರು ತಮ್ಮದೇ ಕಾರಿನಲ್ಲಿ ಫೋನ್ ಆನ್ ಮಾಡಿಕೊಂಡು ಬೆಂಗಳೂರಿಗೆ ಹೋಗುವುದಿಲ್ಲ. ಗೌರವಾನ್ವಿತ ನ್ಯಾಯಾಧೀಶರಿಗೆ ಧನ್ಯವಾದಗಳು. ಕರೆಗಳ ಮೂಲಕ, ಸಾಮಾಜಿಕ ಜಾಲತಾಣಗಳಲ್ಲಿ ಮೆಸೇಜ್ ಮೂಲಕ ಬೆನ್ನಿಗೆ ನಿಂತ ನಿಮ್ಮೆಲ್ಲರಿಗೂ, ಮಾಧ್ಯಮ ಮಿತ್ರರಿಗೂ ಧನ್ಯವಾದಗಳು ಎಂದು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ