ಪ್ರತಿಭಾ ಕೊಲೆ ಪ್ರಕರಣ: ಆರೋಪಿ ಶಿವುಕುಮಾರ್‌ಗೆ ಜೀವಾವಧಿ ಶಿಕ್ಷೆ ಖಾಯಂ

ಮಂಗಳವಾರ, 31 ಮೇ 2016 (15:46 IST)
ಬಿಪಿಒ ಉದ್ಯೋಗಿ ಪ್ರತಿಭಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶಿವಕುಮಾರ್‌ಗೆ ಸ್ಥಳೀಯ ನ್ಯಾಯಾಲಯ ನೀಡಿದ್ದ ಜೀವಾವಧಿ ಶಿಕ್ಷೆಯನ್ನು ಹೈಕೋರ್ಟ್ ಎತ್ತಿಹಿಡಿದಿದೆ. 
 
ಚಾಲಕ ಶಿವುಕುಮಾರ್ ಡಿಸೆಂಬರ್ 13, 2005 ರಲ್ಲಿ ಬಿಪಿಒ ಉದ್ಯೋಗಿ ಪ್ರತಿಭಾ ಅವರನ್ನು ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸೆಷನ್ಸ್ ಕೋರ್ಟ್ 2010 ರ ಅಕ್ಟೋಬರ್‌ನಲ್ಲಿ ಅಪರಾಧಿಗೆ ಜೀವನ ಪೂರ್ತಿ ಜೈಲಿನಲ್ಲಿ ಇರುವಂತೆ ಜೀವಾವಧಿ ಶಿಕ್ಷೆಯನ್ನು ವಿಧಿಸಿತ್ತು.
 
ಬೆಂಗಳೂರು ಸೆಷನ್ಸ್ ಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ, ಅಪರಾಧಿ ಶಿವಕುಮಾರ ಹೈಕೋರ್ಟ್‍‌ಗೆ ಮೋರೆ ಹೋಗಿದ್ದ. ಆದರೆ, ಇದೀಗ ಹೈಕೋರ್ಟ್ ಸ್ಥಳೀಯ ನ್ಯಾಯಾಲಯ ನೀಡಿರುವ ತೀರ್ಪನ್ನು ಎತ್ತಿಹಿಡಿದಿದೆ.


ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ವೆಬ್ದುನಿಯಾವನ್ನು ಓದಿ