ಮಸೀದಿಯಲ್ಲಿ ಪ್ರಾರ್ಥನೆ : ವಕ್ಫ್ ಆಡಳಿತ ಮಂಡಳಿ ರದ್ದು

ಸೋಮವಾರ, 4 ಮೇ 2020 (18:25 IST)
ಜಾಮಿಯಾ ಮಸೀದಿಯಲ್ಲಿ ಲಾಕ್‍ಡೌನ್ ಉಲ್ಲಂಘಿಸಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ವಕ್ಫ್ ಸಂಸ್ಥೆಯ ಆಡಳಿತ ಮಂಡಳಿಯನ್ನು ರದ್ದುಗೊಳಿಸಲಾಗಿದೆ.

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಟಿ. ಬೊಮ್ಮನಳ್ಳಿ ಗ್ರಾಮದ ಜಾಮಿಯಾ ಮಸೀದಿಯಲ್ಲಿ ಲಾಕ್‍ಡೌನ್ ಉಲ್ಲಂಘಿಸಿ ಏಪ್ರಿಲ್ 26 ರಂದು ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ  ವಕ್ಫ್ ಮಂಡಳಿಯು ಈ ವಕ್ಫ್ ಸಂಸ್ಥೆಯ ಆಡಳಿತ ಮಂಡಳಿಯನ್ನು ರದ್ದುಗೊಳಿಸಿದೆ ಎಂದು ಕಲಬುರಗಿ ಜಿಲ್ಲಾ ವಕ್ಫ್ ಅಧಿಕಾರಿಗಳು ತಿಳಿಸಿದ್ದಾರೆ.

ಇದಲ್ಲದೇ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯು ಈ ವಕ್ಫ್ ಸಂಸ್ಥೆಯನ್ನು ತನ್ನ ನೇರ ಆಡಳಿತಕ್ಕೆ ಪಡೆದು  ಟಿ. ಬೊಮ್ಮನಳ್ಳಿ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಸೈಯದ್ ಫಯಾಜ್ ಅಹ್ಮದ್ ಅವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ