ಗರ್ಭಿಣಿಯರಿಗೂ ಮಧ್ಯಾಹ್ನದ ಬಿಸಿಯೂಟ ಭಾಗ್ಯ: ಸಚಿವೆ ಉಮಾಶ್ರೀ

ಸೋಮವಾರ, 14 ನವೆಂಬರ್ 2016 (17:53 IST)
ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಗರ್ಭಿಣಿಯರಿಗೂ ನೀಡಲು ರಾಜ್ಯ ಸರಕಾರ ನಿರ್ಧರಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಖಾತೆ ಸಚಿವೆ ಉಮಾಶ್ರೀ ಹೇಳಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಯಿಂದ ಆಯೋಜಿಸಿದ್ದ ಮಕ್ಕಳ ಹಬ್ಬ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಕ್ಕಳಲ್ಲಿನ ಅಪೌಷ್ಠಿಕತೆ ಹೋಗಲಾಡಿಸಲು ಗರ್ಭಿಣಿಯರಿಗೆ ಪೌಷ್ಠಿಕ ಆಹಾರ ನೀಡಬೇಕು ಎಂದು ಅಭಿಪ್ರಾಯಪಟ್ಟರು.
 
ಈಗಾಗಲೇ ರಾಜ್ಯದ ಮೂರುನಾಲ್ಕು ತಾಲೂಕಗಳಲ್ಲಿ ಪ್ರಾಯೋಗಿಕವಾಗಿ ಜಾರಿಗೆ ತಂದಿರುವ ಗರ್ಭಿಣಿಯರಿಗೂ ಮಧ್ಯಾಹ್ನದ ಬಿಸಿಯೂಟ ನೀಡುವ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಖಾತೆ ಸಚಿವೆ ಉಮಾಶ್ರೀ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ