ಸಿ ಇ ಟಿ ಪರೀಕ್ಷೆಗೆ ಸಿದ್ಧತೆ ಆರಂಭ

ಶುಕ್ರವಾರ, 17 ಜುಲೈ 2020 (21:35 IST)
ಪಿ.ಯು.ಸಿ ವಿದ್ಯಾರ್ಥಿಗಳಿಗೆ ಜುಲೈ 30 ಹಾಗೂ 31 ರಂದು ನಡೆಸಲಿರುವ ಸಿ.ಇ.ಟಿ. ಪರೀಕ್ಷೆಗೆ ಸಿದ್ಧತೆ ನಡೆಯುತ್ತಿದೆ.

ಸಿಇಟಿಯನ್ನು ಸುವ್ಯವಸ್ಥಿತವಾಗಿ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಉನ್ನತ ಶಿಕ್ಷಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಮಣ ರೆಡ್ಡಿ ಸೂಚಿಸಿದ್ದಾರೆ.

ಸಿ.ಇ.ಟಿ. ಪರೀಕ್ಷೆ ಕುರಿತು ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿದ ಅವರು, ಪರೀಕ್ಷೆ ಮುಗಿದ ನಂತರ ಉತ್ತರ ಪತ್ರಿಕೆಯನ್ನು ಖಜಾನೆಗೆ ತಲುಪಿಸುವಂತೆ ಎಲ್ಲಾ ಪರೀಕ್ಷಾ ಕೇಂದ್ರಗಳಿಗೂ ನೋಡೆಲ್ ಆಫೀಸರ್ ಮತ್ತು ರೂಟ್ ಆಫೀಸರ್‍ಗಳನ್ನು ನೇಮಿಸಿ ಎಂದರು.

ಕೋವಿಡ್-19 ಸೋಂಕು ಹೆಚ್ಚಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಪ್ರತಿ ವಿದ್ಯಾರ್ಥಿಗಳು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸಿ ಪರೀಕ್ಷೆ ಬರೆಯುವಂತೆ ವ್ಯವಸ್ಥೆ ಮಾಡಬೇಕು.

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಡಿ.ಡಿ.ಪಿ.ಐ. ಕಚೇರಿಯಲ್ಲಿ ಪಡೆದಿದ್ದ ಥರ್ಮಲ್ ಸ್ಕ್ಯಾನರ್‍ಗಳನ್ನು ಬಳಸಿ ಹಾಗೂ ಮಾಸ್ಕ್‍ಗಳನ್ನು ಹೆಚ್ಚುವರಿಯಾಗಿ ಕಾಯ್ದಿರಿಸಬೇಕು. ಮಾಸ್ಕ್ ಇಲ್ಲದ ವಿದ್ಯಾರ್ಥಿಗಳಿಗೆ ಮಾಸ್ಕ್ ನೀಡಿ ಎಂದು ಅಪರ ಮುಖ್ಯ ಕಾರ್ಯದರ್ಶಿ ರಮಣ ರೆಡ್ಡಿ ಅವರು ಜಿಲ್ಲಾಧಿಕಾರಿಗಳಿಗೆ ತಿಳಿಸಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ