ಮದುವೆಗೆ ಸಿದ್ಧತೆ, ವಿದ್ಯಾರ್ಥಿನಿ ಆತ್ಮಹತ್ಯೆ

ಭಾನುವಾರ, 15 ಮೇ 2022 (13:45 IST)
ತುಮಕೂರು: ವಿದ್ಯಾರ್ಥಿನಿಯೋರ್ವಳು ಬೆಂಕಿಹಚ್ಚಿಕೊಂಡು  ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಗ್ರಾಮದಲ್ಲಿ ನಡೆದಿದೆ.
 
ತೇಜಾ (19) ಆತ್ಮಹತ್ಯೆ ಮಾಡಿಕೊಂಡು ವಿದ್ಯಾರ್ಥಿನಿ. ಈಕೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಭಾನುವಾರ ಬೆಳಗಿನಜಾವ 4.30ರ ಸುಮಾರಿನಲ್ಲಿ ಘಟನೆ ಸಂಭವಿಸಿದೆ.
 
ತೇಜಾ, ಪಾವಗಡದಲ್ಲಿ ಮೊದಲನೇ ವರ್ಷದ ಬಿಕಾಂ ವಿದ್ಯಾಭ್ಯಾಸ ಮಾಡುತ್ತಿದ್ದಳು. ಇದೇ ಮೇ 24-25 ರಂದು ಮದುವೆ ನಿಶ್ಚಯವಾಗಿತ್ತು‌. ಪೋಷಕರು ಮದುವೆ ಆಮಂತ್ರಣ ಪತ್ರಿಕೆಯನ್ನು ಎಲ್ಲಾ ಕಡೆ ಕೊಟ್ಟಿದ್ದರು‌.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. 
 
ಈಕೆಗೆ ಮದುವೆ ಇಷ್ಟವಿರಲಿಲ್ಲವೋ ಅಥವಾ ಇನ್ನಾವ ಕಾರಣದಿಂದ ಈಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೋ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಪಾವಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ. ಈ ಬಗ್ಗೆ ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ