ಓಮಿಕ್ರಾನ್ ಚಿಕಿತ್ಸೆಗೆ ಸಿದ್ಧತೆ

ಭಾನುವಾರ, 5 ಡಿಸೆಂಬರ್ 2021 (11:10 IST)
ಮಡಿಕೇರಿ : ಕರ್ನಾಟಕಕ್ಕೆ ಓಮಿಕ್ರಾನ್ ಸೋಂಕು ಕಾಲಿಟ್ಟಿದ್ದು, ಕೋವಿಡ್ ಮೂರನೇ ಅಲೆ ಆತಂಕ ಎದುರಾಗಿದೆ.
ಈ ಹಿನ್ನೆಲೆಯಲ್ಲಿ ಇದೀಗಾ ಕೊಡಗು ಜಿಲ್ಲಾಸ್ಪತ್ರೆ ಮತ್ತು ಮೆಡಿಕಲ್ ಕಾಲೇಜಿನಲ್ಲಿ ಬೆಡ್ಗಳ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ಕೊಡಗು ಜಿಲ್ಲೆಯ ಆರೋಗ್ಯ ಇಲಾಖೆಯಿಂದ ಬೆಡ್ಗಳ ಸಿದ್ಧತೆ ನಡೆಯುತ್ತಿದೆ. ಮಡಿಕೇರಿ ನಗರದ ಮೆಡಿಕಲ್ ಕಾಲೇಜಿನಲ್ಲಿ 200 ಬೆಡ್ಗಳ ವ್ಯವಸ್ಥೆಯನ್ನು ವೈದ್ಯಕೀಯ ಸಿಬ್ಬಂದಿ ಮಾಡಿಕೊಂಡಿದ್ದಾರೆ. ಮೆಡಿಕಲ್ ಕಾಲೇಜಿಗೆ ಡಿಎಚ್ಓ ವೆಂಕಟೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು
ಆಕ್ಸಿಜನ್ ಉತ್ಪಾದನಾ ಘಟಕಗಳ ಪರಿಶೀಲನೆ ನಡೆಸಿದ ನಂತರ ಮಾತನಾಡಿದ ಅವರು, ಜಿಲ್ಲಾಸ್ಪತ್ರೆ, ಮೆಡಿಕಲ್ ಕಾಲೇಜು ಮತ್ತು ಪ್ರತೀ ತಾಲೂಕು ಆಸ್ಪತ್ರೆಯಲ್ಲಿ ಆಕ್ಸಿಜನ್ ಘಟಕ ಸಿದ್ಧವಾಗಿದ್ದು, ಸರ್ಕಾರದ ಸೂಚನೆಯಂತೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಈಗಾಗಲೇ 560 ಬೆಡ್ಗಳನ್ನು ರೆಡಿ ಮಾಡಲಾಗುತ್ತಿದೆ.
ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿಲ್ಲ. ಆದರೂ ಈಗಾಗಲೇ ಅಗತ್ಯ ಔಷಧ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ