ಬೇರೆ ರಾಜ್ಯದವರನ್ನು ಹೊರಗೆ ಕಳಿಸಲು ಸಿದ್ಧತೆ
ಕೊರೊನಾ ವೈರಸ್ ಸೋಂಕು ಹರಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದಲ್ಲಿ ಸಿಲುಕಿಕೊಂಡಿರುವ ಬೇರೆ ಬೇರೆ ರಾಜ್ಯದವರನ್ನು ಅವರ ಊರಿಗೆ ಕಳಿಸಲು ಸಿದ್ಧತೆಗಳು ನಡೆಯುತ್ತಿವೆ.
ಹೊರ ರಾಜ್ಯಗಳಿಂದ ಆಗಮಿಸಿದ್ದ ಕಾರ್ಮಿಕರು ಹಾಗೂ ಇತರರನ್ನು ಅವರವರ ರಾಜ್ಯಗಳಿಗೆ ಕಳುಹಿಸಲು ಜಿಲ್ಲೆಯಲ್ಲಿ ವ್ಯವಸ್ಥಾಪನಾ ಸಮಿತಿ ರಚಿಸಲಾಗಿದೆ.
ಈ ತಿಂಗಳ 20 ರಿಂದ 22ರೊಳಗೆ ಮೊದಲಿಗೆ ಉತ್ತರ ಪ್ರದೇಶದ ಕಾರ್ಮಿಕರನ್ನು ಕಳುಹಿಸಿಕೊಡಲಾಗುತ್ತಿದೆ. ನಂತರದಲ್ಲಿ ಮಧ್ಯ ಪ್ರದೇಶ, ಬಿಹಾರ ಹಾಗೂ ಜಾರ್ಖಂಡ್‌ನ ಜನರನ್ನು ಅವರ ರಾಜ್ಯಗಳಿಗೆ ಕಳುಹಿಸಿಕೊಡುವ ವ್ಯವಸ್ಥೆ ಮಾಡಲಾಗುವುದು ಎಂದಿದ್ದಾರೆ.