ಪ್ರೆಸ್ ಕ್ಲಬ್ ಪ್ರಶಸ್ತಿ ಮುಂದೂಡಿಕೆ

ಬುಧವಾರ, 5 ಜನವರಿ 2022 (18:13 IST)
ಕೊರೊನಾ ನಿಯಂತ್ರಣದ ಸಲುವಾಗಿ ಸಭೆ ಸಮಾರಂಭಗಳಿಗೆ ಬ್ರೇಕ್ ಹಾಕಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಹಿನ್ನೆಲೆ ಗುರುವಾರ ನಿಗದಿಯಾಗಿದ್ದ ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಮುಂದೂಡಿಕೆ ಮಾಡಲಾಗಿದೆ. ಬೆಂಗಳೂರು ಪ್ರೆಸ್ ಕ್ಲಬ್ ಪದಾಧಿಕಾರಿಗಳಿಂದ ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದ್ದು, ಅರಮನೆ ಮೈದಾನದಲ್ಲಿ ನಾಳೆ ನಡೆಸಬೇಕಿದ್ದ ಸಮಾರಂಭ ರದ್ದು ಮಾಡಲಾಗಿದೆ ಎಂದು ಹೇಳಲಾಗಿದೆ
ಸಮಾರಂಭದ ಮುಂದಿನ ದಿನಾಂಕ ಶೀಘ್ರವೇ ಪ್ರಕಟಣೆ ಆಗಲಿದೆ ಎಂದು ಮಾಹಿತಿ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ