ಬಿಜೆಪಿಗೆ ಬಾಹ್ಯ ಬೆಂಬಲ ನೀಡಲು ಕುಮಾರಸ್ವಾಮಿಗೆ ಜೆಡಿಎಸ್ ಶಾಸಕರಿಂದ ಒತ್ತಡ

ಶನಿವಾರ, 27 ಜುಲೈ 2019 (10:48 IST)
ಬೆಂಗಳೂರು : ಕಾಂಗ್ರೆಸ್ ಜೆಡಿಎಸ್ ನ ಮೈತ್ರಿ ಸರ್ಕಾರ ಉರುಳಿದ ಬೆನ್ನಲೇ ಇದೀಗ ಸರ್ಕಾರ ರಚಿಸುತ್ತಿರುವ ಬಿಜೆಪಿಗೆ ಬಾಹ್ಯ ಬೆಂಬಲ ನೀಡಲು ಮಾಜಿ ಸಿಎಂ ಎಚ್‍ ಡಿ ಕುಮಾರಸ್ವಾಮಿ ಅವರಿಗೆ ಕೆಲವು ಶಾಸಕರು ಒತ್ತಡ ಹೇರುತ್ತಿದ್ದಾರೆ ಎಂಬುದಾಗಿ ಶಾಸಕ ಜಿಟಿ ದೇವೇಗೌಡ ಅವರು ಹೇಳಿದ್ದಾರೆ.



ತಾಜ್ ವೆಸ್ಟ್ ಆಂಡ್ ಹೋಟೆಲಿನಲ್ಲಿ ಶುಕ್ರವಾರ ಸಂಜೆ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಜೆಡಿಎಸ್ ಶಾಸಕರ ಸಭೆ ನಡೆದ ಬಳಿಕ ಮಾತನಾಡಿದ ಶಾಸಕ ಜಿಟಿ ದೇವೇಗೌಡ ಅವರು, ಪಕ್ಷದ ಎಲ್ಲ ಶಾಸಕರು ಕೂಡ ಒಗ್ಗಟ್ಟಿನಿಂದ ಇರಲು ಪಕ್ಷದ ಶಾಸಕರ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಲಾಗಿತ್ತು. ಈ ವೇಳೆ ಕೆಲ ಶಾಸಕರು ವಿರೋಧಿ ಪಕ್ಷದಲ್ಲಿ ಕುಳಿತು ಕೆಲಸ ಮಾಡುವ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದ್ದಾರೆ.

 

ಆಧರೆ ಮತ್ತಷ್ಟು ಶಾಸಕರು ಬಿಜೆಪಿಗೆ ಬಾಹ್ಯ ಬೆಂಬಲ ನೀಡುವ ಬಗ್ಗೆ ಹೇಳಿದ್ದಾರೆ. ಎಲ್ಲ ಶಾಸಕರು ಅಂತಿಮ ತೀರ್ಮಾನ ತೆಗೆದುಕೊಳ್ಳುವ ನಿರ್ಧಾರವನ್ನು ಕುಮಾರಸ್ವಾಮಿ ಅವರಿಗೆ ನೀಡಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ