ಬೆಲೆ ಏರಿಕೆಯೇ ಈಗಿನ ಸರ್ಕಾರದ 6ನೇ ಗ್ಯಾರಂಟಿ : ಬೊಮ್ಮಾಯಿ

ಗುರುವಾರ, 3 ಆಗಸ್ಟ್ 2023 (08:31 IST)
ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಇದು ಕಾಂಗ್ರೆಸ್ ಸರ್ಕಾರದ ದುಬಾರಿ ದುನಿಯಾ, 6ನೇ ಗ್ಯಾರಂಟಿ. ಈ ಸರ್ಕಾರಕ್ಕೆ ಜನ ಸಾಮಾನ್ಯರು ಹಿಡಿ ಶಾಪ ಹಾಕುತ್ತಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
 
ಈ ಕುರಿತು ಟ್ಚೀಟ್ ಮಾಡಿರುವ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ವಿದ್ಯುತ್ ದರ ಏರಿಕೆ, ಟೊಮೆಟೋ ಸಮೇತ ಎಲ್ಲ ತರಕಾರಿ ಬೆಲೆ ಏರಿಕೆ, ನಂದಿನಿ ಹಾಲು, ಮೊಸರು, ಮಜ್ಜಿಗೆ ಬೆಲೆ ಏರಿಕೆ, ಹೊಟೆಲ್ಗಳಲ್ಲಿ ತಿಂಡಿಗಳ ಬೆಲೆ ಏರಿಕೆ, ಬಜೆಟ್ನಲ್ಲಿ ಅಬಕಾರಿ ತೆರಿಗೆ ಹೆಚ್ಚಳ, ಮೋಟಾರ್ ವೆಹಿಕಲ್ ತೆರಿಗೆ ಹೆಚ್ಚಳ, ಸ್ಟ್ಯಾಂಪ್ ಡ್ಯೂಟಿ ಹೆಚ್ಚಳ ಮೂಲಕ ಬರುವಂತ ದಿನಗಳಲ್ಲಿ ಮತ್ತಷ್ಟು ಬೆಲೆ ಏರಿಕೆಯಾಗಲಿದೆ.

ರಾಜ್ಯ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ದುನಿಯಾ ದುಬಾರಿಯಾಗಿದ್ದು ಜನತೆ ಹಿಡಿ ಶಾಪ ಹಾಕುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ