ಮಹಾದಾಯಿ ವಿವಾದದಲ್ಲಿ ಪ್ರಧಾನಿ ಮಧ್ಯಸ್ತಿಕೆ ಅಗತ್ಯ– ಖರ್ಗೆ

ಭಾನುವಾರ, 14 ಜನವರಿ 2018 (17:02 IST)
ಮಹಾದಾಯಿ ನೀರಿನ ವಿವಾದ ಬಗೆಹರಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಧ್ಯಸ್ತಿಕೆ ಅಗತ್ಯವಿದೆ ಎಂದು ಲೋಕಸಭೆಯ ಕಾಂಗ್ರೆಸ್ ಪಕ್ಷದ ನಾಯಕ ಎಂ.ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
 
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಡಿಯುವ ನೀರಿನ ವಿಚಾರದಲ್ಲಿ ಪ್ರಧಾನಮಂತ್ರಿ ಮಾನವೀಯತೆ ತೋರಬೇಕು ಎಂದು ಆಗ್ರಹಿಸಿದ್ದಾರೆ.
 
ಇಂದಿರಾಗಾಂಧಿ ಅವರು ಪ್ರಧಾನಮಂತ್ರಿ ಆಗಿದ್ದಾಗ ಕಾವೇರಿ ನೀರಿನ ವಿವಾದದಲ್ಲಿ ಮಧ್ಯಸ್ತಿಕೆ ವಹಿಸಿ, ವಿವಾದ ಬಗೆಹರಿಸಿದ್ದರು ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ