ಕೋವಿಡ್ ನಿರ್ವಹಣೆಗೆ ಪರೀಕ್ಷೆ, ಟ್ರಾಕಿಂಗ್, ಟ್ರೇಸಿಂಗ್, ಟ್ರ್ಯಾಜಿಂಗ್ ಮತ್ತು ಟೆಕ್ನಾಲಜಿ ಬಳಕೆಯ ಸೂತ್ರವನ್ನು ರಾಜ್ಯ ಅಳವಡಿಸಿಕೊಂಡಿದ್ದು, ನಿನ್ನೆ ನಡೆದ ಸಭೆಯಲ್ಲಿ ಈ ಸೂತ್ರಕ್ಕೆ ಮೆಚ್ಚುಗೆ ಸಿಕ್ಕಿದೆ ಎಂದು ಸಿಎಂ ಹೇಳಿದ್ದಾರೆ.
ಪ್ರಧಾನಿ ಮೋದಿ ಅವರು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಕೋವಿಡ್ ನಿಯಂತ್ರಣ ಹಾಗೂ ನಿರ್ವಹಣೆ ಬಗ್ಗೆ ಮಾತನಾಡಿದರು. ಈ ವೇಳೆ ನಮ್ಮ ರಾಜ್ಯದಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ವಿವರಿಸಲಾಗಿದೆ. ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪರೀಕ್ಷೆ ನಡೆಸುತ್ತಿರುವ ಕುರಿತು ಹಾಗೂ ರಾಜ್ಯದಲ್ಲಿ ಲಸಿಕೆ ಹಾಕಿಸಿಕೊಂಡವರ ಪ್ರಮಾಣ ದೇಶದ ಸರಾಸರಿಗಿಂತ ಹೆಚ್ಚಿರುವ ಕುರಿತು ಪ್ರಧಾನಿ ಮೋದಿ ಸಂತಸ ಹೆಚ್ಚಿಸಿದ್ದಾರೆ.