ಭಾರತ ಪ್ರವಾಸಕ್ಕಾಗಿ ಆಗಮಿಸಿರುವ ಜಪಾನ್ ಪ್ರಧಾನಮಂತ್ರಿ ಶಿಂಜೋ ಅಬೆಯವರನ್ನು ಪ್ರಧಾನಮಂತ್ರಿ ಖುದ್ದಾಗಿ ವಿಮಾನ ನಿಲ್ದಾಣದಲ್ಲಿ ಹಾಜರಾಗಿ ಭವ್ಯ ಸ್ವಾಗತ ಕೋರಿದ್ದಾರೆ.
ಜಪಾನ್ ಪ್ರಧಾನಿ ಶಿಂಜೋ ಮತ್ತು ಅವರ ಪತ್ನಿ ಅಕಿ ಅಬೆ ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿದ್ದಂತೆ ಆವರನ್ನು ಭವ್ಯ ರೀತಿಯಲ್ಲಿ ಸ್ವಾಗತಿಸಿದ ಪ್ರಧಾನಿ ಮೋದಿ, ನಂತರ ದಂಪತಿಗಳೊಂದಿಗೆ ವಿಮಾನನಿಲ್ದಾಣದಿಂದ 8 ಕಿ.ಮೀ ದೂರದಲ್ಲಿರುವ ಸಬರಮತಿ ಆಶ್ರಮದವರೆಗೆ ರೋಡ್ ಶೋ ನಡೆಸಿದರು.
ವಿಮಾನ ನಿಲ್ದಾಣದಿಂದ ಸಬರಮತಿ ಆಶ್ರಮದವರೆಗೂ ಪ್ರಧಾನಿ ಮೋದಿ ಮತ್ತು ಜಪಾನ್ ಪ್ರಧಾನಿ ಶಿಂಜೋ ಅಬೆ ದಂಪತಿಗಳ ಬೃಹತ್ ಫ್ಲೆಕ್ಸ್‌ಗಳನ್ನು ಹಾಕಲಾಗಿತ್ತು. ರಸ್ತೆ ಮಾರ್ಗದಲ್ಲಿ ಶಾಲಾ ಮಕ್ಕಳು ಜಪಾನ್ ಪ್ರಧಾನಿ ದಂಪತಿಗಳಿಗೆ ಶುಭಕೋರಿದರು.
ಮೋದಿ ಮತ್ತು ಶಿಂಜೋ ಇಂದು ಅಹ್ಮದಾಬಾದ್‌ನಲ್ಲಿಯೇ ವಾಸ್ತವ್ಯ ಹೂಡಲಿದ್ದು ಪ್ರಧಾನಿ ಮೋದಿ ರಾತ್ರಿ ಔತಣಕೂಟ ಏರ್ಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮುಂಬೈ-ಅಹ್ಮದಾಬಾದ್ ಬುಲೆಟ್ ರೈಲಿಗೆ ಜಪಾನ್ ಪ್ರಧಾನಿ ಶಿಂಜೋ ಅಬೆ ಚಾಲನೆ ನೀಡಲಿದ್ದು, 2022 ರಲ್ಲಿ ಬುಲೆಟ್ ರೈಲು ಸಂಚಾರ ಸಾಕಾರಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.