ಬೆಂಗಳೂರು : ಯಲಹಂಕದ ವಾಯುನೆಲೆಯಲ್ಲಿ 5 ದಿನಗಳ ಕಾಲ ನಡೆಯುವ ವಿಶ್ವದ ಗಮನ ಸೆಳೆಯುವ ಏರೋ ಇಂಡಿಯಾ-2023 ವೈಮಾನಿಕ ಪ್ರದರ್ಶನಕ್ಕೆ ಪ್ರಧಾನಿ ನರೇಂದ್ರ ಮೋದಿ ಅಧಿಕೃತ ಚಾಲನೆ ನೀಡಿದರು.
ದೇಶದ 32 ದೇಶದ ರಕ್ಷಣಾ ಸಚಿವರು, 29 ರಾಷ್ಟ್ರಗಳ ವಾಯುಪಡೆಯ ಮುಖ್ಯಸ್ಥರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ಸಾರಂಗ್, ಸೂರ್ಯಕಿರಣ್, ವೈಮಾನಿಕ ಪ್ರದರ್ಶನ ತಂಡ, ಸುಖೋಯ್, ರಫೆಲ್, ತೆಜಸ್ ಸೇರಿದಂತೆ ಒಟ್ಟು 67 ವಿಮಾನಗಳಿಂದ ಸಾಹಸ ಪ್ರದರ್ಶನ ನಡೆಯಲಿದೆ. ಕಳೆದ ಬಾರಿ 44 ವಿಮಾನಗಳು ಪ್ರದರ್ಶನ ತೋರಿದ್ದವು.
ಏರ್ ಶೋನ ಮೊದಲ ಮೂರು ದಿನ ವಹಿವಾಟಿಗೆ ಸೀಮಿತಗೊಳಿಸಲಾಗಿದೆ. ಈ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಫೆ.16, 17 ರಂದು ಮಾತ್ರ ವೈಮಾನಿಕ ಪ್ರದರ್ಶನ ನೋಡಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ.