ಪ್ರಧಾನಿ ಮೋದಿಯವರ ಮಲತಾಯಿ ಧೋರಣೆ ಸರಿಯಲ್ಲ: ಉಮಾಶ್ರೀ

ಬುಧವಾರ, 21 ಡಿಸೆಂಬರ್ 2016 (11:53 IST)
ಒಕ್ಕೂಟ ವ್ಯವಸ್ಥೆಯಲ್ಲಿ ಎಲ್ಲಾ ರಾಜ್ಯಗಳು ಒಂದೇ ರೀತಿಯಲ್ಲಿ ಕಾಣಬೇಕು. ಆದರೆ, ಪ್ರಧಾನಿ ನರೇಂದ್ರ ಮೋದಿಯವರ ಮಲತಾಯಿ ಧೋರಣೆ ಸರಿಯಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಉಮಾಶ್ರೀ ಕಿಡಿಕಾರಿದ್ದಾರೆ. 
 
ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಕೆಲ ಪ್ರದೇಶದಲ್ಲಿ ಅತೀವೃಷ್ಠಿ ಮತ್ತು ಅನಾವೃಷ್ಠಿಯಾಗಿದೆ. ಪ್ರಧಾನಿ ಮೋದಿ ಅವರು ಒಕ್ಕೂಟ ವ್ಯವಸ್ಥೆಯಲ್ಲಿ ಎಲ್ಲಾ ರಾಜ್ಯಗಳು ಒಂದೇ ರೀತಿಯಲ್ಲಿ ಕಾಣಬೇಕು ಎಂದರು.
 
ಚಂಡಮಾರುತದಿಂದ ತಮಿಳುನಾಡಿನಲ್ಲಿ ಉಂಟಾದ ನಷ್ಟದ ಬಗ್ಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಸಮಯ ನೀಡಿದ್ದಾರೆ. ಆದರೆ, ಬರದ ಕುರಿತು ಚರ್ಚಿಸಲು ನಮ್ಮ ರಾಜ್ಯದ ಮುಖ್ಯಮಂತ್ರಿ ಹಲವು ಬಾರಿ ಮನವಿ ಮಾಡಿಕೊಂಡರು ಸಮಯ ನೀಡಿಲ್ಲ ಎಂದು ಆರೋಪಿಸಿದರು.  
 
ಮಡಿಕೇರಿಯ ದಿಡ್ಡಹಳ್ಳಿ ಗ್ರಾಮದಲ್ಲಿ ಗಿರಿಜನರು ಹಾಗೂ ಆದಿವಾಸಿಗಳು ಪುನರ್ ವಸತಿ ಕಲ್ಪಿಸುವಂತೆ ಪ್ರತಿಭಟನೆ ನಡೆಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಹಾಗೂ ಕಂದಾಯ ಇಲಾಖೆ ಸಚಿವರು ನ್ಯಾಯ ದೊರಕಿಸಿಕೊಡುವ ಭರವಸೆ ನೀಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಉಮಾಶ್ರೀ ಹೇಳಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ