ಆಪರೇಶನ್ ಕಮಲದ ಹಿಂದೆ ಪ್ರಧಾನಿ ಮೋದಿ ಕೈವಾಡವಿಲ್ಲ - ಮಾಜಿ ಪ್ರಧಾನಿ ದೇವೇಗೌಡ

ಮಂಗಳವಾರ, 5 ಫೆಬ್ರವರಿ 2019 (13:01 IST)
ಬೆಂಗಳೂರು : ದೋಸ್ತಿ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನದಲ್ಲಿರುವ ಆಪರೇಶನ್ ಕಮಲದ ಹಿಂದೆ ಪ್ರಧಾನಿ ನರೇಂದ್ರ ಮೋದಿಯ ಕೈವಾಡವಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡರು ಹೇಳಿದ್ದಾರೆ.


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಗೌಡರು 'ಕೇವಲ 3 ದಿನ ಸಿಎಂ ಆಗಿದ್ದ ಯಡಿಯೂರಪ್ಪ ಗೆ ನೋವಿದೆ. ಹೀಗಾಗಿ, ಅಧಿಕಾರಕ್ಕಾಗಿ ಸ್ವಲ್ಪ ಪ್ರಯತ್ನ ನಡೆಸಿದ್ದಾರೆ. ಮೈತ್ರಿ ಸರಕಾರವನ್ನು ಅಸ್ಥಿರಗೊಳಿಸುವ ಆಪರೇಷನ್‌ ಕಮಲದ ಹಿಂದೆ ಪ್ರಧಾನಿ ನರೇಂದ್ರ ಮೋದಿ ಪಾತ್ರವಿದೆ ಎಂದು ನನಗನಿಸುತ್ತಿಲ್ಲ’ ಎಂದು ಹೇಳಿದ್ದಾರೆ.


'ಆಪರೇಷನ್‌ ಕಮಲಕ್ಕಾಗಿ ಶಾಸಕರಿಗೆ ತಲಾ 50 ಕೋಟಿ ರೂ. ಆಮಿಷ ನೀಡಲಾಗುತ್ತಿದೆ. ಮೈತ್ರಿ ಸರಕಾರ ಕೆಡವಿ ಹೊಸ ಸರಕಾರ ರಚಿಸುವ ಕನಸು ಕಾಣುತ್ತಿರುವ ಬಿಜೆಪಿಯ ಸ್ಥಳೀಯ ಮುಖಂಡರಿಗೆ ಇಷ್ಟೊಂದು ಕೋಟಿ ಕೋಟಿ ದುಡ್ಡು ಎಲ್ಲಿಂದ ಬಂತು ಎಂಬುದೇ ಅರ್ಥವಾಗುತ್ತಿಲ್ಲ,'ಎಂದು ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ