ಕರ್ನಾಟಕದಲ್ಲಿ ಬಿಜೆಪಿ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ ಮೋದಿ
ಸೋಮವಾರ, 18 ಸೆಪ್ಟಂಬರ್ 2017 (18:17 IST)
ಮಿಶನ್ 150 ಕನಸು ಕಾಣುತ್ತಿರುವ ರಾಜ್ಯ ಬಿಜೆಪಿ ನಾಯಕರಿಗೆ ಚೈತನ್ಯ ನೀಡಲು ಸ್ವತಃ ನರೇಂದ್ರ ಮೋದಿ ಆಗಮಿಸಲಿದ್ದಾರೆ ಎಂಬ ಮಾಹಿತಿ ಬಂದಿದೆ. ನವೆಂಬರ್ 2ಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಲಿದ್ದು, ಬೃಹತ್ ಸಮಾವೇಶದ ಮೂಲಕ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.
ನವೆಂಬರ್ 2ರಂದು ನರೇಂದ್ರ ಮೋದಿಯವರೇ ಬೃಹತ್ ಪರಿವರ್ತನಾ ರ್ಯಾಲಿಗೆ ಚಾಲನೆ ನೀಡಲಿದ್ದು, ರಾಜ್ಯದ ವಿವಿಧೆಡೆ 120 ರ್ಯಾಲಿಗಳನ್ನ ನಡೆಸಲು ಬಿಜೆಪಿ ಮುಂದಾಗಿದೆ ಎಂಬ ಮಾಹಿತಿ ಬಂದಿದೆ. ಈ 120 ರ್ಯಾಲಿಗಳಲ್ಲಿ 26 ರ್ಯಾಲಿಗಳಲ್ಲಿ ಸ್ವತಃ ನರೇಂದ್ರಮೋದಿ ಭಾಷಣ ಮಾಡಲಿದ್ದಾರೆ. 2018ರ ಚುನಾವಣಾ ದೃಷ್ಟಿಯಿಂದ ಈ ಬೃಹತ್ ರ್ಯಾಲಿಗಳನ್ನ ನಡೆಸಲಾಗುತ್ತಿದೆ. ಸಮಾವೇಶದಲ್ಲಿ ಕೇಂದ್ರ ಸರ್ಕಾರದ ಅಭಿವೃದ್ಧಿ ಕಾರ್ಯಗಳು ಮತ್ತು ರಾಜ್ಯ ಸರ್ಕಾರದ ವೈಫಲ್ಯಗಳನ್ನ ಜನರ ಮುಂದಿಡಲು ನಿರ್ಧರಿಸಲಾಗಿದೆ.
ಕರ್ನಾಟಕದಲ್ಲೂ ಶತಾಯಗತಾಯ ಅಧಿಕಾರದ ಚುಕ್ಕಾಣಿ ಹಿಡಿದು ದಕ್ಷಿಣದಲ್ಲೂ ತಮ್ಮ ಕಮಲ ಅರಳಿಸಲು ಮುಂದಾಗಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೊಸ ತಂತ್ರ ರೂಪಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ