ಚುನಾವಣಾ ಫಲಿತಾಂಶದ ಬಳಿಕ ಮೈತ್ರಿ ಕೂಟದ ಪ್ರಧಾನಿ ಅಭ್ಯರ್ಥಿ ಘೋಷಣೆ

ಬುಧವಾರ, 22 ಮೇ 2019 (11:37 IST)
ಬೆಂಗಳೂರು : ಲೋಕಸಭಾ ಚುನಾವಣಾ ಫಲಿತಾಂಶದ ನಂತರ ಮೈತ್ರಿ ಕೂಟದ ಪ್ರಧಾನಿ ಅಭ್ಯರ್ಥಿ ಯಾರು? ಎಂದು ಘೋಷಣೆ ಮಾಡುವುದಾಗಿ ಮಾಜಿ ಪ್ರಧಾನಿ ದೇವೇಗೌಡರು ಹೇಳಿದ್ದಾರೆ.




ಈ ಕುರಿತು ಈಗಾಗಲೇ ಚಂದ್ರಬಾಬು ನಾಯ್ದು ಸಿತಾರಾಮ್ ಯೆಚೂರಿ, ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ಮುಖಂಡ ಅರವಿಂದ್ ಕೇಜ್ರಿವಾಲ್ ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬಿಎಸ್‌ ಪಿ ನಾಯಕಿ ಮಾಯಾವತಿ ಮತ್ತು ಎಸ್​​ ಪಿ ನಾಯಕ ಅಖಿಲೇಶ್ ಯಾದವ್ ಅವರ ಜತೆಗೂ ಮಾತುಕತೆ ನಡೆಸಿದ್ದಾರೆ.


ಇದೀಗ ಲೋಕಸಭಾ ಚುನಾವಣಾ ಫಲಿತಾಂಶಕ್ಕೆ ಮುನ್ನವೇ ಮಂಗಳವಾರ ಬೆಂಗಳೂರಿಗೆ ಆಗಮಿಸಿದ ಆಂದ್ರ ಸಿಎಂ ಚಂದ್ರಬಾಬು ನಾಯ್ದು ಅವರು ಮಾಜಿ ಪ್ರಧಾನಿ ದೇವೇಗೌಡರೊಂದಿಗೆ ಮಾತುಕತೆ ನಡೆಸಿದ್ದಾರೆ. ಮಾತುಕತೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ದೇವೇಗೌಡ್ರು ಚುನಾವಣೆ ಫಲಿತಾಂಶದ ನಂತರ ಮೈತ್ರಿ ಕೂಟದ ಪ್ರಧಾನಿ ಅಭ್ಯರ್ಥಿ ಯಾರು? ಎಂದು ಹೇಳಲಾಗುವುದು ಅಂತ ಹೇಳಿದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ