ಸೆಪ್ಟೆಂಬರ್ 7 ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ ಪ್ರಧಾನಿ ಮೋದಿ

ಗುರುವಾರ, 29 ಆಗಸ್ಟ್ 2019 (14:21 IST)
ಮೈಸೂರು : ರಾಜ್ಯದ ನೆರೆ ಪರಿಸ್ಥಿಯ ಬಗ್ಗೆ ಮಾಹಿತಿ ಪಡೆಯಲು ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್ 7 ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ಈಗಾಗಲೇ ಕೇಂದ್ರ ಸಚಿವ ಅಮಿತ್ ಶಾ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಅವರು ರಾಜ್ಯಕ್ಕೆ ಭೇಟಿ ನೀಡಿ ನೆರೆ ಪರಿಸ್ಥಿತಿಯ ಬಗ್ಗೆ ಮಾಹಿತಿ ಸಂಗ್ರಹಿಸಿದ್ದರು. ಆದರೂ ವಿರೋಧ ಪಕ್ಷದವರು ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಭೇಟಿ ನೀಡಬೇಕಿತ್ತು ಎಂದು ಟೀಕೆ ಮಾಡಿದ್ದರು.


ಇದೀಗ ಈ ಬಗ್ಗೆ ಮಾಹಿತಿ ನೀಡಿದ ಸಿಎಂ ಯಡಿಯೂರಪ್ಪ, 'ಪ್ರವಾಹದಿಂದಾಗಿ ರಾಜ್ಯಕ್ಕೆ ಅಪಾರವಾದ ನಷ್ಟ ಉಂಟಾಗಿದೆ. ಈ ಕುರಿತು ಪರಾಮರ್ಶೆ ನಡೆಸಲು ನರೇಂದ್ರ ಮೋದಿ ಸೆಪ್ಟೆಂಬರ್ 7 ರಂದು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಈ ವೇಳೆ ರಾಜ್ಯದ ನೆರೆ ಪರಿಸ್ಥಿತಿಯ ಕುರಿತು ಅವರಿಗೆ ಮನದಟ್ಟು ಮಾಡಿಕೊಡಲಾಗುವುದು. ಹೆಚ್ಚಿನ ಪರಿಹಾರಕ್ಕೂ ಒತ್ತಾಯಿಸಲಾಗುವುದು. ಈ ಕುರಿತು ಕೇಂದ್ರದಿಂದ ಆದಷ್ಟು ಶೀಘ್ರದಲ್ಲಿ ಶುಭ ಸುದ್ದಿ ಸಿಗುವ ವಿಶ್ವಾಸ ಇದೆ' ಎಂದು ತಿಳಿಸಿದ್ದಾರೆ.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ