ಕೈದಿ ಸಾವು: ಜೈಲು ಸಿಬ್ಬಂದಿ ನಿರ್ಲಕ್ಷ್ಯದ ಆರೋಪ

ಗುರುವಾರ, 4 ಅಕ್ಟೋಬರ್ 2018 (14:02 IST)
ಖಾಸಗಿ‌ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಕೈದಿ ಸಿದ್ದರಾಮಪ್ಪ ಮೃತಪಟ್ಟಿದ್ದಾನೆ. ಜೈಲಿನ ಸಿಬ್ಬಂದಿ ಸೂಕ್ತ ಚಿಕಿತ್ಸೆ ಕೊಡದ ಹಿನ್ನೆಲೆಯಲ್ಲಿ ಮೃತಪಟ್ಟಿದ್ದಾರೆಂದು ಮೃತ ಕೈದಿಯ ಕುಟುಂಬಸ್ಥರು ಆರೋಪಿಸಿದ್ದಾರೆ.

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಕಂದಗೂಳ ಮೂಲದ ಸಿದ್ದರಾಮಪ್ಪ ಶೆಟ್ಟೆಪ್ಪನವರ್ (60)ಗೆ ಕೊಲೆ ಪ್ರಕರಣದಲ್ಲಿ 12 ವರ್ಷ ಜೈಲು ಶಿಕ್ಷೆಯಾಗಿತ್ತು.

ಕಲಬುರಗಿ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಸಿದ್ದರಾಮಪ್ಪ ಶೆಟ್ಟೆಪ್ಪನವರ್ ಆರೋಗ್ಯ ಹದಗೆಟ್ಟಿದ ಹಿನ್ನೆಲೆಯಲ್ಲಿ ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಜೈಲು ಸಿಬ್ಬಂದಿ ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡದೇ ನಿರ್ಲಕ್ಷ್ಯ ಮಾಡಿದ್ದರಿಂದ ಸಿದ್ದರಾಮಪ್ಪ ಶೆಟ್ಟೆಪ್ಪನವರ್ ಮೃತಪಟ್ಟಿದ್ದಾರೆ ಎಂದು ಆರೋಪಿಸಿರುವ ಕುಟುಂಬಸ್ಥರು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ