ವೈದ್ಯರಿಲ್ಲದೇ ರೋಗಿಗಳ ಪರದಾಟ ಕೇಳೋರೇ ಇಲ್ಲ

ಶುಕ್ರವಾರ, 3 ನವೆಂಬರ್ 2017 (10:04 IST)
ಬೆಂಗಳೂರು: ಖಾಸಗಿ ಆಸ್ಪತ್ರೆ ವಿದೇಯಕಕ್ಕೆ ತಿದ್ದುಪಡಿ ತರಲು ಹೊರಟಿರುವ ಸರ್ಕಾರದ ಕ್ರಮ ವಿರೋಧಿಸಿ ಖಾಸಗಿ ಆಸ್ಪತ್ರೆಗಳು ಮುಷ್ಕರ ನಡೆಸುತ್ತಿರುವುದರಿಂದ ರೋಗಿಗಳು ಪರದಾಡುವಂತಾಗಿದೆ.

 
ರಾಮನಗರ, ಮಾಗಡಿ, ಕನಕಪುರ, ವಿಜಯಪುರ, ಧಾರವಾಡ ಸೇರಿದಂತೆ ರಾಜ್ಯಾದ್ಯಂತ ಹಲವಾರು ಖಾಸಗಿ ಆಸ್ಪತ್ರೆಗಳು ಮುಷ್ಕರದಲ್ಲಿ ಪಾಲ್ಗೊಂಡಿರುವುದರಿಂದ ರೋಗಿಗಳು ಪರದಾಡುವಂತಾಗಿದೆ. ಮುಷ್ಕರದ ಮಾಹಿತಿಯಿಲ್ಲದೇ ಆಸ್ಪತ್ರೆಗೆ ಬರುತ್ತಿರುವ ರೋಗಿಗಳು ವೈದ್ಯರಿಲ್ಲದೇ ಪರದಾಡುತ್ತಿದ್ದಾರೆ.

ಇದೇ ವೇಳೆ ಖಾಸಗಿ ಆಸ್ಪತ್ರೆಗಳ ವೈದ್ಯರು ಇಲ್ಲದ ಕಾರಣ ಸರ್ಕಾರಿ ವೈದ್ಯರನ್ನು ಸನ್ನದ್ಧರಾಗಿರುವಂತೆ ಸೂಚಿಸಲಾಗಿದೆ. ಇಂದು ಬೆಳಿಗ್ಗೆ 8 ಗಂಟೆಯಿಂದ ನಾಳೆ ಬೆಳಿಗ್ಗೆ 8 ಗಂಟೆಯವರೆಗೆ ಮುಷ್ಕರ ನಡೆಸಲು ಖಾಸಗಿ ವೈದ್ಯರು ತೀರ್ಮಾನಿಸಿದ್ದಾರೆ. ಆದರೆ ಹೊರ ರೋಗಿಗಳ ಚಿಕಿತ್ಸೆ ನಿಲ್ಲಿಸಲಾಗಿದ್ದು, ಒಳರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ