ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆಯನ್ನು ನಾಯಿಗೆ ಹೋಲಿಸಿ ಆಕ್ರೋಶಕ್ಕೊಳಗಾಗಿದ್ದ ಬಿಜೆಪಿ ಶಾಸಕ ಛಲವಾದಿ ನಾರಾಯಣ ಸ್ವಾಮಿ ಈಗ ಕ್ಷಮೆ ಯಾಚಿಸಿದ್ದಾರೆ.
ಕಲಬುರಗಿ ಪ್ರವಾಸದಲ್ಲಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಆಪರೇಷನ್ ಸಿಂಧೂರ್ ಬಗ್ಗೆ ಅನುಮಾನ ವ್ಯಕ್ತಪಡಿಸಿ, ಮೋದಿ ಟೀಕಿಸಿದ್ದ ಮಲ್ಲಿಕಾರ್ಜುನ ಖರ್ಗೆ ಮತ್ತು ಪುತ್ರ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದರು.
ಈ ನಡುವೆ ಅವರು ಆನೆ ನಡೆಯುವಾಗ ನಾಯಿ ಬೊಗಳುತ್ತದೆ. ಹಾಗೆಯೇ ಪ್ರಧಾನಿ ದೇಶದ ಪರವಾಗಿ ಇರುವಾಗ ಪ್ರಿಯಾಂಕ್ ನಾಯಿ ತರ ಬೊಗಳುತ್ತಾರೆ ಎಂದಿದ್ದರು. ಪ್ರಿಯಾಂಕ್ ಕ್ಷೇತ್ರದಲ್ಲೇ ಛಲವಾದಿ ಈ ಹೇಳಿಕೆ ನೀಡಿದ್ದರು. ಇದರಿಂದ ಸಿಟ್ಟಿಗೆದ್ದ ಪ್ರಿಯಾಂಕ್ ಅಭಿಮಾನಿಗಳು ಛಲವಾದಿಯನ್ನು ಸುತ್ತುವರಿದು ಕ್ಷಮೆ ಕೇಳಲು ಆಗ್ರಹಿಸಿದ್ದರು.
ಇದರಿಂದಾಗಿ ನಾಲ್ಕೈದು ಗಂಟೆಗಳ ಕಾಲ ಛಲವಾದಿ ಚಿತ್ತಾಪುರದ ಪ್ರವಾಸಿ ಮಂದಿರ ಒಳಗೇ ಕೂರುವಂತಾಯಿತು. ಬಳಿಕ ತಮ್ಮ ಹೇಳಿಕೆಗೆ ಅವರು ವಿಷಾಧ ವ್ಯಕ್ತಪಡಿಸಿದರು. ಮೂಲಗಳ ಪ್ರಕಾರ ಬಿಎಸ್ ಯಡಿಯೂರಪ್ಪ ಸೂಚನೆ ಮೇರೆಗೆ ಛಲವಾದಿ ವಿಷಾಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಇದಾದ ಬಳಿಕ ಅವರು ಪ್ರವಾಸೀ ಮಂದಿರದಿಂದ ಯಾದಗಿರಿಯತ್ತ ಪ್ರಯಾಣ ಮಾಡಿದ್ದಾರೆ.