ಆರ್ ಎಸ್ಎಸ್ ಗೆ ಕಡಿವಾಣ ಹಾಕಿ ಎಂದು ಸಿಎಂಗೆ ಪತ್ರ ಬರೆದ ಪ್ರಿಯಾಂಕ್ ಖರ್ಗೆ: ಮಾಡಿ ನೋಡಿ ಎಂದ ನೆಟ್ಟಿಗರು

Krishnaveni K

ಸೋಮವಾರ, 13 ಅಕ್ಟೋಬರ್ 2025 (09:30 IST)
ಬೆಂಗಳೂರು: ಆರ್ ಎಸ್ಎಸ್ ಚಟುವಟಿಕೆಗಳನ್ನು ನಿರ್ಬಂಧಿಸುವಂತೆ ಸಿಎಂ ಸಿದ್ದರಾಮಯ್ಯಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದು ಇದಕ್ಕೆ ನೆಟ್ಟಿಗರು ಮೊದಲು ಮಾಡಿ ನೋಡಿ ಎಂದು ಸವಾಲೆಸೆದಿದ್ದಾರೆ.

ಪ್ರಿಯಾಂಕ್ ಖರ್ಗೆ ಸಿಎಂಗೆ ಬರೆದ ಪತ್ರವನ್ನು ಟ್ವೀಟ್ ಮಾಡಿದ್ದು ‘ಮಕ್ಕಳು ಹಾಗೂ ಯುವ ಸಮುದಾಯದ ಮೇಲೆ ನಾಕಾರಾತ್ಮ ಪರಿಣಾಮಗಳನ್ನು ಉಂಟುಮಾಡಲು ಯತ್ನಿಸುವ ಆರ್ಎಸ್ಎಸ್ ಪ್ರಯತ್ನವನ್ನು ತಡೆಯುವ, ಸಂವಿಧಾನದ ಆಶಯಗಳನ್ನು, ಏಕತೆ, ಸಮಾನತೆ, ಸಮಗ್ರತೆಯನ್ನು ಎತ್ತಿ ಹಿಡಿಯುವ ಉದ್ದೇಶದೊಂದಿಗೆ ಎಲ್ಲಾ ಸರ್ಕಾರಿ ಸಾರ್ವಜನಿಕ ಪ್ರದೇಶದಲ್ಲಿ ಆರ್ಎಸ್ಎಸ್ ನ ಚಟವಟಿಕೆಗಳನ್ನು ನಿರ್ಬಂಧಿಸುವಂತೆ ಮುಖ್ಯಮಂತ್ರಿಗಳಿಗೆ ಕೋರಿಕೆ ಸಿಲ್ಲಿಸಿದ್ದೇನೆ’ ಎಂದಿದ್ದಾರೆ.

ಇದಕ್ಕೆ ಸಾಕಷ್ಟು ಜನ ಕಾಮೆಂಟ್ ಮಾಡಿದ್ದಾರೆ. ನೆಹರೂ, ಇಂದಿರಾ ಗಾಂಧಿ ಕೈಯಲ್ಲೇ ಆಗಲಿಲ್ಲ. ಈಗ ನಿಮ್ಮ ಕೈಯಲ್ಲಿ ಏನು ಮಾಡಕ್ಕೆ ಆಗುತ್ತದೆ ನೋಡ್ತೀವಿ ಎಂದು ಕೆಲವರು ಸವಾಲೆಸೆದಿದ್ದಾರೆ.

ಮೊದಲು ಪಾಕಿಸ್ತಾನಕ್ಕೆ ಜಿಂದಾಬಾದ್ ಹೇಳುವವರ ವಿರುದ್ಧ ಶಿಕ್ಷಣದ ಹೆಸರಿನಲ್ಲಿ ಭಯೋತ್ಪಾದನೆಗೆ ತರಬೇತಿ ನೀಡುವವರ ವಿರುದ್ಧ ಕ್ರಮ ಕೈಗೊಳ್ಳಿ. ನಂತರ ಆರ್ ಎಸ್ಎಸ್ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಮಾತನಾಡಿ ಎಂದು ಕಿಡಿ ಕಾರಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ